×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಸಮಿತಿ ವತಿಯಿಂದ SIR ಕುರಿತು ಸಾರ್ವಜನಿಕ ಸಮಾಲೋಚನಾ ಸಭೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ( SIR) ಕುರಿತು ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರ ಅಧ್ಯಕ್ಷತೆಯಲ್ಲಿ ಉಡುಪಿಯ ಪುರಭವನ ದಲ್ಲಿ ಇಂದು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ರವರು ಭಾಗವಹಿಸಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ನಿಂದಾಗುವ ಸಮಸ್ಯೆಗಳು ಹಾಗೂ ಅದನ್ನು ಯಾವ ರೀತಿ ಎದುರಿಸಬಹುದು ಎಂಬ ವಿಷಯದಲ್ಲಿ ಸಮಾಲೋಚನೆ ನಡೆಸಿದರು. ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಶಾಹಿದ್ ಆಲಿ ಯವರು ಅತಿಥಿಯಾಗಿ ಆಗಮಿಸಿದ್ದರು.

ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿರುವ ಶಂಸುದ್ದೀನ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು, ವೇದಿಕೆಯಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಹನೀಫ್ ಮುಳೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ವೈ ಎಸ್, ಉಡುಪಿ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಶ್ರಫ್ ಭಾವ ರವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಗಣ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *