×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಚ್ಚಿಲ ಬಡಾ ಗ್ರಾಮ ಪಂಚಾಯತ್ : ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿದ ಚಂದ್ರಾವತಿ ವಿ. ಆಚಾರ್ಯಗೆ ಬೀಳ್ಕೊಡುಗೆ – ಸಮ್ಮಾನ

ಪಡುಬಿದ್ರಿ: ಉಚ್ಚಿಲ ಬಡಾ ಗ್ರಾಮ ಪಂಚಾಯತ್ ನಲ್ಲಿ ಎಟೆಂಡರ್, ಕ್ಲರ್ಕ್ ಆಗಿ 31 ವರ್ಷಗಳ ಕಾಲ ಸುದೀರ್ಘ ಸೇವೆಯನ್ನು ಸಲ್ಲಿಸಿ ಇದೀಗ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿ ಬೆಳಪು ಗ್ರಾ.ಪಂ.ಗೆ ನಿಯುಕ್ತಿಗೊಂಡಿರುವ ಚಂದ್ರಾವತಿ ವಿ. ಆಚಾರ್ಯ ಉಚ್ಚಿಲ ಅವರನ್ನು ಬಡಾ ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಿ, ಸಮ್ಮಾನಿಸಿ ಬೀಳ್ಕೊಡಲಾಯಿತು.

ಡಿ.29ರಂದು ಉಚ್ಚಿಲ ಬಡಾ ಗ್ರಾ.ಪಂ. ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಶಿವ ಕುಮಾರ್ ಮೆಂಡನ್, ಉಪಾಧ್ಯಕ್ಷರಾದ ದೀಪಕ್ ಕುಮಾರ್ ಎರ್ಮಾಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ಆರ್.ಜಿ., ಅಕೌಂಟೆಂಟ್ ನಿರ್ಮಲಾ ಶೆಟ್ಟಿ, ಗ್ರಾ.ಪಂ. ಸದಸ್ಯರು, ಸಿಬಂದಿ ವರ್ಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *