ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಆರು ದಿನಗಳ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 19 ಜನವರಿ 2026 ರಂದು ರಾಮಕೃಷ್ಣ ಮಠ, ಮಂಗಳೂರು ಇಲ್ಲಿ ಉದ್ಘಾಟನೆಗೊಂಡಿತು.
ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ರಾಮಕೃಷ್ಣ ಮಿಷನ್, ಮಂಗಳೂರು ಇದರ ಅಧ್ಯಕ್ಷರಾದ ಸ್ವಾಮಿ ಜಿತಕಮಾನಂದ ಇವರು ವಹಿಸಿದ್ದರು. ಇವರು ಮಾತನಾಡಿ ಶಿಸ್ತು, ಸಮಾಜ ಸೇವೆ ಹಾಗೂ ವಿದ್ಯಾರ್ಥಿಗಳಲ್ಲಿ ಚರಿತ್ರಾ ನಿರ್ಮಾಣದ ಮಹತ್ವದ ಬಗ್ಗೆ ತಿಳಿಸಿದರು.
ಈ ಸಮಾರಂಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ
ಸಂಯೋಜಕರಾದ ಶ್ರೀ ಸಚಿನ್ ಪ್ರಭು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಆರು ದಿನಗಳ ಶಿಬಿರವು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣಗಳು ಮತ್ತು ಸಮುದಾಯ ಸೇವೆಗಳ ಮೌಲ್ಯಗಳನ್ನು ಬೆಳೆಸುವ ಉದ್ದೇಶವನ್ನು ಹೊಂದಿದೆ.

