ಕಾಪು ಉಳಿಯಾರಗೋಳಿ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪ್ರಾಂಶುಪಾಲ ನೀಲಾನಂದ ನಾಯ್ಕ್ ಇವರ ಧ್ವಜಾರೋಹಣದೊಂದಿಗೆ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು.ಬಳಿಕ ಮಾತನಾಡಿ,ನಮ್ಮ ದೇಶ ಭಾಷಾವಾರು ಪ್ರಾಂತ್ಯಗಳಾಗಿ ರಚಿಸಲ್ಪಟ್ಟ ನಂತರ ಪ್ರಗತಿಯು ಅತ್ಯಂತ ವೇಗದ ಕಡೆಗೆ ಸಾಗಿತು.ಮತ್ತು ಆಡಳಿತಾತ್ಮಕವಾಗಿ ಬಹಳಷ್ಟು ಬದಲಾವಣೆಗೆ ಕಾರಣವಾಯಿತು.ಇದನ್ನು ತಿಳಿದು ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರದ ಬಗ್ಗೆ ಹೆಚ್ಚು ಗಮನ ಹರಿಸಿ ಪ್ರಗತಿಗಾಗಿ ತನ್ನನ್ನು ತೊಡಗಿಸಬಹುದು.
ಸಮಾರಂಭದಲ್ಲಿ ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್,ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರುಗಳಾದ ಗೇಬ್ರಿಯಲ್ ಮಸ್ಕರೇನ್ಹಸ್, ಕೃಪ ಅಮ್ಮನ್ನ ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಶೆಟ್ಟಿ ಹಾಗೂ ಶಿಕ್ಷಕ ,ಶಿಕ್ಷಕೇತರ ವೃಂದ ದವರು,ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

