ಕಾಪುವಿನ ಪೊಲಿಪು ರಸ್ತೆಯಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾll. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಇಂದು ದಿನಾಂಕ 05-02-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಊಟೊಪಚಾರ ಹಾಗೂ ವಿಧ್ಯಾರ್ಥಿ ನಿಲಯದಲ್ಲಿ ಇರುವ ವಸತಿ ವ್ಯವಸ್ಥೆ ಬಗ್ಗೆ ಶಾಸಕರು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ವಸತಿ ನಿಲಯದ ವಾರ್ಡನ್ ಬಳಿ ಸಮಗ್ರ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ರೋಷನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್ ಹಾಗೂ ಪದಾಧಿಕಾರಿಗಳು, ಹಾಸ್ಟೆಲ್ ವಾರ್ಡನ್ ಉಪಸ್ಥಿತರಿದ್ದರು.

