×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕರ್ಣಾಟಕ ಬ್ಯಾಂಕ್‌ “ಸಂಸ್ಥಾಪಕರ ದಿನ” ದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಫೆಬ್ರವರಿ‌ 18ರಂದು

ಉಡುಪಿ: ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉಡುಪಿಯ ಅಂಬಾಗಿಲಿನಲ್ಲಿರುವ ಬ್ಯಾಂಕಿನ ಉಡುಪಿ ವಲಯ ಕಚೇರಿ ಯಲ್ಲಿ ಫೆ. 18 ರಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 12.30 ವರೆಗೆ ಆಯೋಜಿಸಲಾಗಿದೆ. ಉಡುಪಿಯ ಜಿಲ್ಲಾ ಆಸ್ಪತ್ರೆ ಮತ್ತು ಗಾಂಧಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ ನೆಡೆಯಲಿದೆ. ಬ್ಯಾಂಕಿನ ಎಲ್ಲಾ ಗ್ರಾಹಕರು, ಸಾರ್ವಜನಿಕರು ಈ ಉಚಿತ ತಪಾಸಣೆಯ ಸೌಲಭ್ಯ ಪಡೆದುಕೊಳ್ಳಬೇಕು ಮತ್ತು ರಕ್ತದಾನದಲ್ಲಿ ಪಾಲ್ಗೊಂಡು ಅಗತ್ಯ ಇದ್ದವರಿಗೆ ನೆರವಾಗುವ ಸಾಮಾಜಿಕ ಕಾರ್ಯದಲ್ಲಿ ಬ್ಯಾಂಕಿನೊಂದಿಗೆ ಕೈ ಜೋಡಿಸಬೇಕು ಎಂದು ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ಮುಖ್ಯಸ್ಥ ಎ. ಜಿ. ಎಂ. ಶ್ರೀ ರಮೇಶ್ ವೈದ್ಯ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *