×
Our website is made possible by displaying online advertisements to our visitors. Please consider supporting us by whitelisting our website.
  • 9880645340

ದಂಡತೀರ್ಥ : ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷಾ ಶಿಬಿರ ಉದ್ಘಾಟನೆ

ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆಗಳು ವಿವಿಧ ಹಂತಗಳಲ್ಲಿ ನಡೆಯುತ್ತಿದ್ದು, ವಿದ್ಯಾರ್ಥಿಗಳು ಮುಂದೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಭಾಗವಹಿಸಿ, ತಮ್ಮ ಜೀವನದಲ್ಲಿ ಶಿಸ್ತು ಮತ್ತು ಸಾಮಾಜಿಕ ಸೇವಾ ಮನೋಭಾವನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಸಹಾಯಕ ಆಯುಕ್ತ ಹಾಗೂ ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಆಲ್ಬನ್ ರೊಡ್ರಿಗಸ್ ಹೇಳಿದರು.
ಅವರು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಪು ಸ್ಥಳೀಯ ಸಂಸ್ಥೆಯವರು ನಡೆಸಿದ ದ್ವಿತೀಯ ಸೋಪಾನ ಪರೀಕ್ಷಾ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಪು ಸ್ಥಳೀಯ ಸಂಸ್ಥೆಯ ಗೌರವ ಅಧ್ಯಕ್ಷ ಹಾಗೂ ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯ ಸಂಚಾಲಕ ಡಾ.ಕೆ. ಪ್ರಶಾಂತ್ ಶೆಟ್ಟಿ ಮಾತನಾಡಿ, ಶಿಬಿರದಲ್ಲಿ ವಿದ್ಯಾರ್ಥಿಗಳು ಪಡೆದುಕೊಂಡ ಶಿಸ್ತು, ಕಲಿತ ಪಾಠ ಮತ್ತು ವಿವಿಧ ಕೌಶಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಶ್ರೀಮತಿ ಸುಮನ್ ಶೇಖರ್ ಹಾಗೂ ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗರವರು ಶಿಬಿರದ ಕುರಿತು ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.
ಇತ್ತೀಚೆಗೆ ಅಗಲಿದ ಸ್ಥಳೀಯ ಸಂಸ್ಥೆಯ ಸ್ಥಾಪಕ ಗೌರವಾಧ್ಯಕ್ಷ ಹಾಗೂ ಕಾಪು ವಿದ್ಯಾನೀಕೇತನ ಶಿಕ್ಷಣ ಸಂಸ್ಥೆಯ ಸ್ಥಾಪಕ ಕೆ. ಪಿ. ಆಚಾರ್ಯ ಇವರ ಆತ್ಮಕ್ಕೆ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.
ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ. ನೀಲಾನಂದ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಗೇಬ್ರಿಯಲ್ ಮಸ್ಕರೇನ್ಹಸ್, ಜಿಲ್ಲಾ ಸಹಾಯಕ ಆಯುಕ್ತ ಹಾಗೂ ಕಾಪು ತಾಲೂಕು ಯುವಜನ ಕ್ರೀಡಾಧಿಕಾರಿ ರಿತೇಶ್ ಕುಮಾರ್ ಶೆಟ್ಟಿ, ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಮಧುಕರ್ ಎಸ್., ಶ್ರೀಮತಿ ರೆಹನ ಬಾನು, ಶ್ರೀಮತಿ ಅನಿಲ್ಡಾ ನೊರೋನ್ನ ಮೊದಲಾದವರು ಉಪಸ್ಥಿತರಿದ್ದರು.
ಕಾಪು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಮರಿಯ ಅನಿತಾ ಮೆಂಡೋನ್ಸ ಸ್ವಾಗತಿಸಿದರು. ಗೈಡ್ ಕ್ಯಾಪ್ಟನ್ ಶ್ರೀಮತಿ ವೀಣಾ ನಾಯಕ್ ವಂದಿಸಿದರು. ಕಬ್ ಮಾಸ್ಟರ್ ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಕಾಪು ಸ್ಥಳೀಯ ಸಂಸ್ಥೆಯ ಸುಮಾರು 260 ವಿದ್ಯಾರ್ಥಿಗಳು ಹಾಗೂ 25 ಶಿಕ್ಷಕರು ಪರೀಕ್ಷಾ ಶಿಬಿರದಲ್ಲಿ ಪಾಲ್ಗೊಂಡರು.

Leave a Reply

Your email address will not be published. Required fields are marked *