
ಏರ್ಮಾಳು ಬಡಾ ಬಿಲ್ಲವರ ಯೂನಿಯನ್ ಸಂಚಾಲಿತ ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಸೋಮವಾರ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮಕ್ಕೆ ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿಯ ಅಧ್ಯಕ್ಷ ಪ್ರಭಾಕರ ಪೂಜಾರಿ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಬಡಾ ಗ್ರಾಮ ವ್ಯಾಪ್ತಿಯ ಸುಮಾರು ೨೫ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಿಸಲಾಯಿತು ಕಾರ್ಯಕ್ರಮದಲ್ಲಿ ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗರು, ಕೋಟಿ ಚೆನ್ನಯ ಯುವ ಬಿಲ್ಲವ ಯುವ ಸಂಘಟನೆ ಹಾಗೂ ಬೈದಶ್ರೀ ಮಹಿಳಾ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

