×
Our website is made possible by displaying online advertisements to our visitors. Please consider supporting us by whitelisting our website.
  • 9880645340

ದಂಡತೀರ್ಥ: ಸಂಸ್ಮರಣಾ ದಿನಾಚರಣೆ

ಕಾಪು, ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಕನ್ನಡ ಮಾಧ್ಯಮ ಶಾಲೆಯ ಸಂಸ್ಥಾಪಕರಾದ ಕೀರ್ತಿಶೇಷ ಮುದ್ದಣ್ಣ ಶೆಟ್ಟರ ಸಂಸ್ಮರಣಾ ದಿನಾಚರಣೆಯನ್ನು ಆಚರಿಸಲಾಯಿತು.
ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಚಾಲಕರಾದ ಡಾl ಕೆ. ಪ್ರಶಾಂತ್ ಶೆಟ್ಟಿಯವರು,ಕಾಪು ಗ್ರಾಮೀಣ ಪರಿಸರದಲ್ಲಿ 109 ವರ್ಷಗಳ ಹಿಂದೆ ಪ್ರಾರಂಭಗೊಂಡ ಈ ವಿದ್ಯಾಸಂಸ್ಥೆ ಇಂದಿಗೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ.ಇದರಿಂದಾಗಿ ಸಂಸ್ಥಾಪಕರು ನಮಗೆ ಆದರ್ಶಪ್ರಾಯರಾಗಿದ್ದಾರೆ.ಅವರ ದೂರದರ್ಶಿತ್ವ ಸಾವಿರಾರು ಮಕ್ಕಳಿಗೆ ಹಾಗೂ ಕುಟುಂಬಗಳಿಗೆ ಆಧಾರಸ್ತಂಭವಾಗಿ ಮೂಡಿ ಬಂದಿದ್ದು ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದರು.
ಪ್ರಾಂಶುಪಾಲರಾದ ನೀಲಾನಂದ ನಾಯ್ಕ್ ಇವರು ಸಂಸ್ಥಾಪಕರ ಜೀವನದ ಆದರ್ಶಗಳನ್ನು ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಕನ್ನಡ ಮಾಧ್ಯಮ ವಿಭಾಗದ ಮುಖ್ಯಸ್ಥೆ ಕೃಪಾ ಅಮ್ಮನ್ನ,ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಶೆಟ್ಟಿ,ಶಿಕ್ಷಕ ಶಿಕ್ಷಕೇತರರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಗೇಬ್ರಿಯಲ್ ಫ್ರೆಂಕೀ ಮಸ್ಕರೇನ್ಹಸ್ ಇವರು ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು .ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್ ವಂದಿಸಿದರು.

Leave a Reply

Your email address will not be published. Required fields are marked *