
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಅ 1ರ ಶನಿವಾರ ಬೆಳಿಗ್ಗೆ 9.30ಕ್ಕೆ ಮೊಗವೀರ ಭವನ ಉಚ್ಚಿಲದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷ ಯಶಾಲ್ ಎ. ಸುವರ್ಣ ತಿಳಿಸಿದ್ದಾರೆ. ಚಿತ್ರ ಬಿಡಿಸುವ ಸ್ಪರ್ಧೆಯ ಚಿತ್ರ ರಚನೆಯ ವಿಷಯವಾಗಿ ದಸರಾ ಮಹೋತ್ಸವವನ್ನು ಆಯ್ಕೆ ಮಾಡಿದ್ದು ಸರ್ಧಿಗಳು ಈ ವಿಷಯಕ್ಕೆ ಸಂಬಂಧಿಸಿದ ಚಿತ್ರವನ್ನು ಬಿಡಿಸಬೇಕು. ಒಟ್ಟು ಐದು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಿದ್ದು ಕಿರಿಯರ ವಿಭಾಗ 1 ರಿಂದ ೩ನೇ ತರಗತಿ, ಪ್ರಾಥಮಿಕ ವಿಭಾಗ [5 ರಿಂದ 7 ನೇ ತರಗತಿ), ಹೈಸ್ಕೂಲ್ ವಿಭಾಗ (8 ರಿಂದ 10ನೇ ತರಗತಿ), ಕಾಲೇಜು ವಿಭಾಗ ಪದವಿಪೂರ್ವ ಮತ್ತು ಪದವಿ ತರಗತಿ) ಹಾಗೂ ಸಾರ್ವಜನಿಕ ವಿಭಾಗದಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದ್ದು ಸ್ಪರ್ಧಾಲುಗಳಿಗೆ ಡ್ರಾಯಿಂಗ್ ಶೀಟ್ ಸ್ಥಳದಲ್ಲೇ ಒದಗಿಸಲಿದ್ದು, ಉಳಿದ ಪರಿಕರಗಳನ್ನು ಅವರೇ ತರತಕ್ಕದ್ದು ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ 3 ಸಮಾಧಾನಕರ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡಲಿದ್ದು, ವಿಜೇತರಿಗೆ ನಗದು ಬಹುಮಾನ, ಸ್ಮರಣಿಕೆ, ಪ್ರಶಸ್ತಿ ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯನ್ನು ಈ ಹಿಂದೆ ಸೆಪ್ಟೆಂಬರ್ 25 ರಂದು ನಡೆಸಲು ನಿರ್ಧರಿಸಿದ್ದು ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮನವಿಯ ಮೇರೆಗೆ ಸ್ಪರ್ಧೆಯನ್ನು ಅಕ್ಟೋಬರ್ 1ರ ಶನಿವಾರ ಆಯೋಜಿಸಲಾಗಿದೆ.ಸ್ಪರ್ಧೆಯಲ್ಲಿ ಭಾಗವಹಿಸಲು ಆನ್‌ಲೈನ್ ನೋಂದಣಿಗಾಗಿ ಹಾಗೂ ಸ್ಪರ್ಧೆಯ ವಿವರಗಳು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ವೆಬ್‌ಸೈಟ್ ನಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ 9964023344, 9972120332 ಸಂಪರ್ಕಿಸಬಹುದು ಸಾರ್ವಜನಿಕರು ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.

