×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ

ಉಡುಪಿ: ​​ಉಡುಪಿ ತಾಲೂಕು ​೧೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ​ ಜಯಕರ ಶೆಟ್ಟಿ ​ಇಂದ್ರಾಳಿ​, ಕಾರ್ಯದರ್ಶಿಯಾಗಿ ಸತೀಶ್ ಕೊಡವೂರು, ಜೊತೆ ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್ ​ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು​.

​ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಉಡುಪಿಯ ರಾಜಾಂಗಣದ ಮಥುರಾ ಕಂಫರ್ಟ್ಸ್ ಸಭಾಂಗಣದಲ್ಲಿ ನೆರವೇರಿತು.

ಹಿರಿಯರು, ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಕಲಾವಿದರು, ಭಾಗವಹಿಸಿದ್ದ ಈ ಸಭೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿಯನ್ನು ಹಾಗೂ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಮೇ 3ರಂದು ​ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ​ಹವಾನಿಯಂತ್ರಿತ ಸಭಾಂಗಣದಲ್ಲಿ​ ಅದ್ದೂರಿಯಾಗಿ ನಡೆಸಲಾಗುವುದು​. ಸಮ್ಮೇಳನ ಸರ್ವಾಧ್ಯಕ್ಷರಾಗಿ ಈಗಾಗಲೇ ಖ್ಯಾತ ವೈದ್ಯ , ಸಾಹಿತಿ, ಕಲಾವಿದ ಡಾ. ಭಾಸ್ಕರಾನಂದ ಕುಮಾರ್ ಇವರನ್ನು ಆಯ್ಕೆಮಾಡಲಾಗಿದೆ.

ಈ ಸಂದಭ೯ದಲ್ಲಿ ​ಉಡುಪಿ ವಿಶ್ವನಾಥ್ ಶೆಣೈ, ​ವಿಶ್ರಾಂತ ಬ್ಯಾಂಕ್ ಅಧಿಕಾರಿ ಸಿ .ಎಸ್ . ರಾವ್ , ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು, ರಂಜಿನಿ ವಸಂತ್ ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ​ ​ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *