×
Our website is made possible by displaying online advertisements to our visitors. Please consider supporting us by whitelisting our website.
  • 9880645340

ತ್ರಿಶಾವಿದ್ಯಾ ಪಿಯು ಕಾಲೇಜು 2025 – 26ನೇ ಸಾಲಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಅಭಿನಂದನಾ ಸಮಾರಂಭ

ಕಟಪಾಡಿ:ಕರಾವಳಿ ಕರ್ನಾಟಕದಲ್ಲಿ ವಾಣಿಜ್ಯ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವುದೇ ತ್ರಿಶಾ ಸಮೂಹ ಸಂಸ್ಥೆಗಳು. ಇದರ ಅಂಗ ಸಂಸ್ಥೆಯಾದ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು ಆರಂಭವಾದ ನಾಲ್ಕು ವರ್ಷಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ 11 ರ್ಯಾಂಕ್ ಗಳನ್ನು ಪಡೆದುಕೊಂಡಿದೆ . ಪ್ರಸಕ್ತ ವರ್ಷ ವಿಜ್ಞಾನ ವಿಭಾಗದಲ್ಲಿ 1 ಮತ್ತು ವಾಣಿಜ್ಯ ವಿಭಾಗದಲ್ಲಿ 8 ರ್ಯಾಂಕ್ ಗಳನ್ನು ಪಡೆದುಕೊಂಡಿದೆ. ವಿದ್ಯಾರ್ಥಿಗಳು ಶಿಕ್ಷಣ ಕ್ರೀಡೆ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ವಿಭಾಗಗಳಲ್ಲೂ ಸಾಧನೆಗಳನ್ನು ಮಾಡ್ತಾ ಇದ್ದಾರೆ. ಇಲ್ಲಿಯ ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣದಲ್ಲೂ ಕೂಡ ತಮ್ಮ ಛಾಪನ ಮೂಡಿಸುತ್ತಿದ್ದಾರೆ.

ತ್ರಿಶಾವಿದ್ಯಾ ಪಿಯು ಕಾಲೇಜು 2025 26ನೇ ಸಾಲಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಅಭಿನಂದನಾ ಸಮಾರಂಭವನ್ನು ದಿನಾಂಕ 24-04-2026, ಶುಕ್ರವಾರ ಸಂಜೆ 4:00 ಗಂಟೆಯಿಂದ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ಗುರ್ಮ ಸುರೇಶ್ ಶೆಟ್ಟಿ, ಶಾಸಕರು (ಕಾಪು ಕ್ಷೇತ್ರ) ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಎ ಗೋಪಾಲ ಕೃಷ್ಣ ಭಟ್, ಸಂಸ್ಥಾಪಕರು, ತ್ರಿಶಾ ಸಮೂಹ ಸಂಸ್ಥೆಗಳು ವಹಿಸಲಿದ್ದಾರೆ.ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಹರಿಪ್ರಸಾದ್ ಹಾಗೂ ತ್ರಿಶಾ ಪಿಯು ಕಾಲೇಜು, ಕೊಟ್ಟಾರ, ಮಂಗಳೂರಿನ ಪ್ರಾಂಶುಪಾಲರಾದ ಶ್ರೀಮತಿ ಯಶಸ್ವಿನಿ ಯಶಪಾಲ್ ಉಪಸ್ಥಿತರಿರುತ್ತಾರೆ. ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪ್ರೊ, ಹರಿಪ್ರಸಾದ್ ಪ್ರಾಂಶುಪಾಲರು ತ್ರಿಶಾ ವಿದ್ಯಾ ಪಿ.ಯು ಕಾಲೇಜು ಕಟಪಾಡಿ,

ಪ್ರೊ. ವಿಪ್ಪೇಶ್ ಶೆಣೈ ಪ್ರಾಂಶುಪಾಲರು ತ್ರಿಶಾ ವಿದ್ಯಾ ಕಾಲೇಜು ಕಟಪಾಡಿ ಡಾ. ಕುಲದೀಪ್ ವೈ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು ಕಟಪಾಡಿ ಧೀರಜ್ ಬೆಳ್ಳಾರೆ ಕನ್ನಡ ಪ್ರಾಧ್ಯಾಪಕ ತ್ರಿಶಾ ವಿದ್ಯಾ ಕಾಲೇಜು ಕಟಪಾಡಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *