ಬಳ್ಳಾರಿಯ ಮಾಜಿ ಶಾಸಕ ಜಿ. ಸೋಮಶೇಖರ್ ರೆಡ್ಡಿ ಮತ್ತು ಮಾಜಿ ಮೇಯರ್ ಶ್ರೀನಿವಾಸ್ ಹಾಗೂ ಅನೇಕ ರಾಜಕೀಯ ನಾಯಕರು ಕಾಪು ತಾಲೂಕಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ದರುಶನ ಪಡೆದು, ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.
ದೇವಳದ ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತ್ರತ್ವದಲ್ಲಿ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಮಾತೃ ವೈಭವ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಸಾವಿತ್ರಿ ಗಣೇಶ್, ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

