×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕೊಡವೂರು ಮಹಾರುದ್ರ ಯಾಗ: ವಸ್ತುಪ್ರದರ್ಶನ ಮಳಿಗೆ, ಮನರಂಜನಾ ಕಾರ್ಯಕ್ರಮಗಳಿಗೆ ಚಾಲನೆ

ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ಪ್ರಯುಕ್ತ ವಸ್ತು ಪ್ರದರ್ಶನ ಮಳಿಗೆ ಹಾಗೂ ಮನೋರಂಜನಾ ಆಟಗಳಿಗೆ ಭಾನುವಾರ ಸಂಜೆ ಚಾಲನೆ ನೀಡಲಾಯಿತು.
ಹಿರಿಯ ಕಾಂಗ್ರೆಸ್ ನಾಯಕಿ ಸರಳಾ ಬಿ ಕಾಂಚನ್ ರಿಬ್ಬನ್ ಕತ್ತರಿಸುವುದರ ಮೂಲಕ ವಸ್ತು ಪ್ರದರ್ಶನ ಮಳಿಗೆ ಹಾಗೂ ಮನೋರಂಜನಾ ಆಟಗಳಿಗೆ ಚಾಲನೆ ನೀಡಿದರೆ. ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಪ್ರತಿಭಾ ಪ್ರದರ್ಶನಾ ಕಾರ್ಯಕ್ರಮ ವೇದಿಕೆಗೆ ಉಡುಪಿ ಜಿಲ್ಲಾ ಮಹಿಳಾ ಮಂಡಳಗಳ ಒಕ್ಕೂಟದ ಅಧ್ಯ ಕ್ಷರಾದ ವಾಸಂತಿ ರಾವ್ ಕೊರಡ್ಕಲ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸರಳಾ ಬಿ ಕಾಂಚನ್ ತಮ್ಮ ಕುಟುಂಬ ಹಾಗೂ ಸಮಾಜದ ಎಲ್ಲರೂ ಜೊತೆಯಾಗಿ ಸೇರಿ ನಡೆಸಲು ಉದ್ದೇಶಿಸಿರುವ ಮಹಾ ರುದ್ರಯಾಗಕ್ಕೆ ಸರ್ವರೂ ಕೂಡ ಸಹಕಾರ ನೀಡುವಂತೆ ಮನವಿ ಮಾಡಿದರು.


ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, ಮಾಜಿ ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಕೊಡವೂರು ಶಂಕರನಾರಾಯಣ ದೇವಸ್ಥಾನದ ಅಧ್ಯಕ್ಷರಾದ ಪ್ರಕಾಶ್ ಜಿ ಕೊಡವೂರು, ಮಹಾರುದ್ರ ಯಾಗ ಸಮಿತಿಯ ಪ್ರಧಾನ ಸಂಚಾಲಕರಾದ ತಾರನಾಥ ಪೂಜಾರಿ, ಕೆ ಕೃಷ್ಣಮೂರ್ತಿ ಆಚಾರ್ಯ, ಸಂಚಾಲಕರಾದ ನಂದಕಿಶೋರ್ ಕೆಮ್ಮಣ್ಣು, ರಮೇಶ್ ತಿಂಗಳಾಯ, ಪದಾಧಿಕಾರಿಗಳಾದ ಡಾ. ವಿಜಯೇಂದ್ರ ವಸಂತ್, ಟಿ. ರಾಘವೇಂದ್ರ ರಾವ್ ಕೊಡವೂರು, ರಾಜ ಎ ಸೇರಿಗಾರ, ಪೀಟರ್ ಸಿಕ್ವೇರಾ, ರೂಫಸ್ ಸಿಕ್ವೇರಾ, ಹೇಮಾವತಿ ಸಾಲ್ಯಾನ್, ಕೇಶವ ಕೋಟ್ಯಾನ್ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *