×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕೊಡವೂರು ಮಹಾರುದ್ರಯಾಗ: ಇಂದು ಮಲ್ಪೆ ಬೀಚ್‌ನಲ್ಲಿ ಮಂಗ್ಲಿ ಸಂಗೀತ ರಸಮಂಜರಿ ಬಹುನಿರೀಕ್ಷಿತ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಜ್ಜು

ಉಡುಪಿ: ಕೊಡವೂರು ಮಹಾರುದ್ರಯಾಗ ಮಹೋತ್ಸವದ ಅಂಗವಾಗಿ ಇಂದು ಸಂಜೆ ಮಲ್ಪೆ ಬೀಚ್‌ನಲ್ಲಿ ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಮಂಗ್ಲಿ ಅವರ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ ಇದೆ.
ಜನಪ್ರಿಯ ಭಕ್ತಿಗೀತೆಗಳು ಹಾಗೂ ಚಲನಚಿತ್ರ ಹಾಡುಗಳ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿರುವ ಮಂಗ್ಲಿ ಅವರ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಜಿಲ್ಲೆ ಸೇರಿದಂತೆ ಕರಾವಳಿ ಭಾಗದ ವಿವಿಧ ಕಡೆಗಳಿಂದ ಜನರು ಆಗಮಿಸುವ ಸಾಧ್ಯತೆ ಇದೆ. ಕಾರ್ಯಕ್ರಮಕ್ಕಾಗಿ ಮಲ್ಪೆ ಕಡಲ ತೀರದಲ್ಲಿ ಭವ್ಯ ವೇದಿಕೆ ನಿರ್ಮಿಸಲಾಗಿದ್ದು, ಅತ್ಯಾಧುನಿಕ ಧ್ವನಿ ಹಾಗೂ ಬೆಳಕು ವ್ಯವಸ್ಥೆ ಕಲ್ಪಿಸಲಾಗಿದೆ.
ಸಂಜೆ 8ಗಂಟೆಗೆ ಆರಂಭಗೊಳ್ಳಲಿರುವ ಸಂಗೀತ ರಸಮಂಜರಿಯಲ್ಲಿ ಭಕ್ತಿಭಾವದ ಹಾಡುಗಳ ಜೊತೆಗೆ ಜನಪ್ರಿಯ ಸಿನೆಮಾ ಗೀತೆಗಳೂ ಕೇಳಿಬರಲಿವೆ ಎಂದು ಆಯೋಜಕರು ತಿಳಿಸಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೀಚ್ ಪ್ರದೇಶದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ವಾಹನ ನಿಲುಗಡೆ ಹಾಗೂ ಜನಸಂದಣಿ ನಿಯಂತ್ರಣಕ್ಕೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕೊಡವೂರು ಮಹಾರುದ್ರಯಾಗದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರಕುತ್ತಿದ್ದು, ಇಂದಿನ ಸಂಗೀತ ರಸಮಂಜರಿ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿದೆ.

Leave a Reply

Your email address will not be published. Required fields are marked *