×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕೊಡವೂರು ಮಹಾರುದ್ರಯಾಗ: ಭಕ್ತರ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ

ಉಡುಪಿ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುತ್ತಿರುವ ಮಹಾರುದ್ರಯಾಗದ ಪ್ರಯುಕ್ತ ಭಕ್ತರ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ಆರಂಭಿಸಲಾಗಿದೆ.
ಮೇ 18 ಮತ್ತು 19ರಂದು ಎರಡು ದಿನಗಳ ಕಾಲ ಈ ವಿಶೇಷ ಸೇವೆ ಲಭ್ಯವಿದ್ದು, ಉಡುಪಿ ಹಾಗೂ ಬ್ರಹ್ಮಾವರ ಭಾಗಗಳಿಂದ ಕೊಡವೂರು ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಆಯೋಜಕರು ತಿಳಿಸಿದ್ದಾರೆ.
ಮಹಾರುದ್ರಯಾಗ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗುಂಪುಗಳಾಗಿ ಬರುವ ಭಕ್ತರಿಗಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ. ಸೇವೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 86601 79172 ಅನ್ನು ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *