×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ರಾಜೀವ್ ಭವನದಲ್ಲಿ ರಾಜೀವ್ ಗಾಂಧಿ ಪುಣ್ಯಸ್ಮರಣೆ

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದ ಭಾರತ ರತ್ನ, ಮಾಜಿ ಪ್ರಧಾನಿ Rajiv Gandhi ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ಗುರುವಾರ ಬೆಳಗ್ಗೆ 10.30ಕ್ಕೆ ಕಾಪು ರಾಜೀವ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷರಾದ ವೈ. ಸುಕುಮಾರ್ ಅವರು ಮಾತನಾಡಿ, ಮಾಜಿ ಪ್ರಧಾನಿ Rajiv Gandhi ಅವರು ದೇಶದ ಅಭಿವೃದ್ಧಿ, ಯುವಜನತೆಗೆ ಅವಕಾಶಗಳು ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ರಾಜೀವ್ ಗಾಂಧಿ ಅವರು ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸುವುದು, ಯುವಶಕ್ತಿಗೆ ಪ್ರೋತ್ಸಾಹ ನೀಡುವುದು ಹಾಗೂ ಆಧುನಿಕ ಭಾರತದ ನಿರ್ಮಾಣಕ್ಕೆ ದೂರದೃಷ್ಟಿಯ ಯೋಜನೆಗಳನ್ನು ಜಾರಿಗೆ ತಂದ ನಾಯಕರು. ಅವರ ಆದರ್ಶ ಮತ್ತು ಸೇವೆಯನ್ನು ಯುವ ಪೀಳಿಗೆ ಅನುಸರಿಸಬೇಕಾಗಿದೆ ಎಂದರು.

ಈ ಸಂದರ್ಭ ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ್, ಕಾಪು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ಕಾಪು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಂತಲತಾ ಶೆಟ್ಟಿ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಪ್ರಮೋದ್ ಚಂದ್ರ, ಪಾಲಿಮಾರ್ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಯಶ್ವಂತ್, ಅಶೋಕ್ ನಾಯರಿ ಹಾಗೂ ಕಾಂಗ್ರೆಸ್ ಮುಖಂಡರುಗಳಾದ ರಾಜೇಶ್ ರಾವ್ ಪಾಂಗಾಳ, ನಯೀಮ್ ಕಟಪಾಡಿ, ಸಿಮ್ಮಿ ಡಿಸೋಜಾ, ಸುಚರಿತ ಪಡುಬಿದ್ರಿ, ಜ್ಯೋತಿ ಮೆನನ್, ಅಶ್ವಿನಿ, ಪ್ರೀತಿ ಪ್ರೀತಿ ಸಾಲಿನ್ಸ್ , ಮುಬಿನಾ ಬೇಗಂ, ಹಸನ್ ಕೋಡಿ, ಸತೀಶ್ ಉಚ್ಚಿಲ, ಬಾಬಣ್ಣ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *