ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈೆ ಅವರು ಎಂಜಿಎಂ ಕಾಲೇಜಿಗೆ ಸುಸಜ್ಜಿತ ಕುರ್ಚಿಗಳನ್ನು ಕಾಲೇಜಿನ ಆಡಳಿತಾಧಿಕಾರಿಯಾದ ಶ್ರೀಧರ್ ಪೈ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯತ್ರಿ ಪೈ, ಉಪ ಪ್ರಾಂಶುಪಾಲರಾದ ಡಾ. ವಿಶ್ವನಾಥ್ ಪೈ , ಪಿ .ಯು. ಪ್ರಾಂಶುಪಾಲರಾದ ಮಾಲತಿ ದೇವಿ, ಕ ಸಾ ಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಸಾಹಿತಿ ಅಂಶುಮಾಲಿ ಉಪಸ್ಥಿತರಿದ್ದರು.

