ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಶ್ರವಣ ಸಾಧನವನ್ನು ಇಂದು ದಿನಾಂಕ 09-06-2026 ರಂದು ಕಾಪು ಶಾಸಕರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು.
ಪೆರ್ಡೂರು ಗ್ರಾಮ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಠಲ ಪೂಜಾರಿ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಖಿಲೇಶ್ ಸೇರಿದಂತೆ ಒಟ್ಟು 2 ಫಲಾನುಭವಿಗಳಿಗೆ ಶ್ರವಣ ಸಾಧನವನ್ನು ವಿತರಿಸಲಾಯಿತು.

