×
Our website is made possible by displaying online advertisements to our visitors. Please consider supporting us by whitelisting our website.
  • 9880645340

*ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯ ಪದಾರ್ಥಗಳ ನಾಶ*

ಉಡುಪಿ ದಿನಾಂಕ 26/06/2026 ಶುಕ್ರವಾರವಾದ ಇಂದು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 73 ಕೆಜಿ 92 ಗ್ರಾಂ 828 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 36,29,550/- ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್‌ವಿರೋಟಿಕ್ ಪ್ರೈ. ಲಿ.. ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು.

ಮಣಿಪಾಲದಲ್ಲಿ 10, ಶಿರ್ವಾ 2 , ಕೋಟ, ಮಲ್ಪೆ, ಕಾಪು, ಉಡುಪಿ ನಗರ, ಸೆನ್ ಅಪರಾಧ ಠಾಣೆ ತಲಾ 01 ಪ್ರಕರಣ ಸೇರಿ ಒಟ್ಟು 17 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯ ಪದಾರ್ಥವನ್ನು ಮಾನ್ಯ ನ್ಯಾಯಾಲಯದ ಆದೇಶಾನುಸಾರ ಮೇರೆಗೆ
ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿಯ ಅಧ್ಯಕ್ಷರಾದ ಹರಿರಾಮ್ ಶಂಕರ್ ನೇತೃತ್ವದಲ್ಲಿ
ನಾಶಗೊಳಿಸಲಾಯಿತು

ಈ ಕಾರ್ಯಾಚರಣೆಯಲ್ಲಿ ಐಪಿಎಸ್, ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿ ಸದಸ್ಯರು ಹಾಗೂ ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಸದಸ್ಯರಾದ ಎಸ್. ವಿಜಯಪ್ರಸಾದ್, ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಸದಸ್ಯರಾದ ಬೆಳ್ಳಿಯಪ್ಪ ಕೆ.ಯು,
ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ಎಸ್. ನಾಯ್ಕ್,ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ,
ಕಾಪು ಪೊಲೀಸ್ ಠಾಣೆಯ ಉಪ ನಿರೀಕ್ಷಕ ತೇಜಸ್ವಿ, ಪಡುಬಿದ್ರಿ ಪೊಲೀಸ್ ಠಾಣೆ ಉಪ ನಿರೀಕ್ಷಕ ಶಕ್ತಿ ವೇಲು ಹಾಗೂ ಪೊಲೀಸ್ ಸಿಬ್ಬಂದಿಗಳು ಮತ್ತು ಮೆ. ಆಯುಷ್ ಎನ್‌ವಿರೋಟಿಕ್ ಪ್ರೈ. ಲಿ.. ಪಡುಬಿದ್ರಿಯ ಅಧಿಕಾರಿಯವರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *