×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸರಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳಿಗೆ ವಿಳಂಬ ದಾಖಲಾತಿ ದಂಡ ಶುಲ್ಕ ರದ್ದು

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ವಿಳಂಬವಾಗಿ ದಾಖಲಾಗುತ್ತಿದ್ದ ವಿದ್ಯಾರ್ಥಿಗಳಿಗೆ  ʻವಿಳಂಬ ದಾಖಲಾತಿ ದಂಡ ಶುಲ್ಕʼ ವಿಧಿಸುವುದಕ್ಕೆ ಸಂಬಂಧಿಸಿದಂತೆ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಶೈಕ್ಷಣಿಕ (2026-27) ಸಾಲಿನಿಂದ  ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ವಿಳಂಬವಾಗಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ವಿಧಿಸಲಾಗುತ್ತಿದ್ದ ₹ 670 ವಿಳಂಬ ದಾಖಲಾತಿ ದಂಡ ಶುಲ್ಕ (Fine for late admission for 10 days) ಹಾಗೂ ₹ 2,220 ವಿಶೇಷ ದಂಡ ಶುಲ್ಕ (Special fine for late admission for 20 days) ಪಾವತಿಯಿಂದ ಸಂಪೂರ್ಣ ವಿನಾಯಿತಿ ನೀಡಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಪೋಷಕರಿಗೆ ನೆರವಾದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಕೃತಜ್ಞತೆ ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *