×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಭಟ್ಕಳ: ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಪಲ್ಟಿ; ಓರ್ವ ಮೃತ್ಯು ಮೂಡಭಟ್ಕಳ ಬೈಪಾಸ್ ಬಳಿ ನಡೆದ ಘಟನೆ

ಭಟ್ಕಳ: ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಉ.ಕ ಜಿಲ್ಲೆಯ ಭಟ್ಕಳ ತಾಲೂಕಿನ ಮೂಡಭಟ್ಕಳ ಬೈಪಾಸ್ ಬಳಿ ನಡೆದಿದೆ. ರಂಗಿನಕಟ್ಟೆಯ ಉನೈಜ್‌ ಹಮ್ಜದ್ ಖತೀಬ್ (20) ಮೃತ ಯುವಕ. ಈತನೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಮೃತ ಯುವಕ ತನ್ನ ನಾಲ್ವರು ಇಂಜಿನಿಯರಿಂಗ್ ಸಹಪಾಠಿಗಳೊಂದಿಗೆ ಕಾರಿನಲ್ಲಿ ಕುಂದಾಪುರದಿಂದ ಭಟ್ಕಳ ಕಡೆಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬಂದಿದ್ದಾನೆ. ಈ ವೇಳೆ ಹೆದ್ದಾರಿಯ ಮಧ್ಯದಲ್ಲಿರುವ ಡಿವೈಡರ್‌ಗೆ ಕಾರು ಢಿಕ್ಕಿ ಹೊಡೆದು, ಪಲ್ಟಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಈ ಬಗ್ಗೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *