×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಭೋವಿ ಜನಾಂಗದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದ ಜಿಲ್ಲಾಡಳಿತದ ಧೋರಣೆ ಖಂಡನೆ; ಹೋರಾಟದ ಎಚ್ಚರಿಕೆ ನೀಡಿದ ಪವನ್ ಕುಮಾರ್ ಶಿರ್ವ

ಕಾಪು, ಜು. 16: ಭೋವಿ ಜನಾಂಗದವರಿಗೆ ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣ ಪತ್ರ ನೀಡಲು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರಾಕರಿಸುತ್ತಿರುವ ಧೋರಣೆಯನ್ನು ಖಂಡಿಸಿ, ಸಮಸ್ಯೆ ಪರಿಹಾರವಾಗದಿದ್ದರೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಎಚ್ಚರಿಕೆ ನೀಡಿದರು.

ಗುರುವಾರ ಕಾಪು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುಮಾರು 70 ಸಾವಿರಕ್ಕೂ ಹೆಚ್ಚು ಭೋವಿ ಸಮುದಾಯದವರು ವಾಸಿಸುತ್ತಿದ್ದು, ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಸಿಗದ ಕಾರಣ ವಿದ್ಯಾರ್ಥಿಗಳು ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.
ಒಂದೇ ಕುಟುಂಬದಲ್ಲಿ ತಂದೆಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಮತ್ತು ಮಕ್ಕಳಿಗೆ ಪ್ರವರ್ಗ-1 ಪ್ರಮಾಣ ಪತ್ರ ನೀಡುತ್ತಿರುವುದರಿಂದ ಗೊಂದಲ ಉಂಟಾಗುತ್ತಿದೆ. ಹೈಕೋರ್ಟ್ ಆದೇಶವಿದ್ದರೂ ಅಧಿಕಾರಿಗಳು ಭೋವಿ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕುತ್ತಿರುವುದು ಖಂಡನೀಯ ಎಂದು ಹೇಳಿದರು.
ಈ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯದಿದ್ದರೆ ಜಿಲ್ಲಾಡಳಿತದ ವಿರುದ್ಧ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಪವನ್ ಕುಮಾರ್ ಶಿರ್ವ ಎಚ್ಚರಿಸಿದರು.

Leave a Reply

Your email address will not be published. Required fields are marked *