×
Our website is made possible by displaying online advertisements to our visitors. Please consider supporting us by whitelisting our website.
  • 9880645340

ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು

ಪಡುಬಿದ್ರಿ, ಜುಲೈ 29: ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಿಯಾಝ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪಡುಬಿದ್ರಿ ಪೊಲೀಸ್ ಠಾಣೆಗೆ ತೆರಳಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ವಿರುದ್ಧ ದೂರು ಸಲ್ಲಿಸಿದರು.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕುರಿತು ಅವಹೇಳನಕಾರಿ ಹಾಗೂ ದ್ವೇಷಭಾಷಣ ಮಾಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಬಾಬರಿ ಮಸೀದಿಯ ಧ್ವಂಸದ ಉದಾಹರಣೆ ನೀಡಿ, ರಾಹುಲ್ ಗಾಂಧಿಯವರ ವಂಶವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದು ಸಮಾಜದಲ್ಲಿ ದ್ವೇಷ ಮತ್ತು ಉದ್ವಿಗ್ನತೆ ಸೃಷ್ಟಿಸುವ ಹೇಳಿಕೆಯಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸೂಕ್ತ ಪ್ರಕರಣ ದಾಖಲಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೈನ್, ಕಾಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಜಾರಿತಾ ಅಮೀನ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೇಶವ್ ಸಿ. ಸಾಲ್ಯಾನ್, ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರ್ಫಾಜ್ ಎಂ.ಎಸ್., ಕಾಪು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ತಸ್ಲೀನ್ ಅರಾ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೀರ್ತಿ ಕುಮಾರ್, ದಾವೂದ್ ಹಕೀಮ್, ರಿಯಾಂ ಕೆರಿ, ಶಫೀಕ್, ಮಥೀಸ್ , ಮಾಜಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯ ಶಫಿ ಎಂ.ಎಸ್., ಮಾಜಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯೆ ಜ್ಯೋತಿ ಮೆನನ್, ಮಾಜಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಕೋಟ್ಯಾನ್, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ, ಮಾಜಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯೆ ಮುಬೀನಾ ಬೇಗಂ, ಪಡುಬಿದ್ರಿ ಎಸ್‌ಸಿ/ಎಸ್‌ಟಿ ಘಟಕದ ಅಧ್ಯಕ್ಷ ವಿಠಲ್ ಮಾಸ್ಟರ್, ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಶ್ರೇಯಸ್, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಉಪಾಧ್ಯಕ್ಷ ಬುಡಾನ್ ಸಾಹೆಬ್ , ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್ ರಜಾಕ್, ಪಕ್ಷದ ಪ್ರಮುಖರಾದ ಅಯಾಜ್, ಕಬೀರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *