ಕಟಪಾಡಿ: ಇಲ್ಲಿನ ಗ್ರಾgಮ ಪಂಚಾಯತ್‌ನಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆಡಳಿತಾಧಿಕಾರಿ ಗುರುಪ್ರಸಾದ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಗೆ ಚಾಲನೆ ನೀಡಿದರು. ಸಂಭ್ರಮ ದಲ್ಲಿ
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ತಿಲಕ್ ರಾಜ್ ಅವರು, “ಲಕ್ಷಾಂತರ ದೇಶಭಕ್ತರ ಅಮರ ತ್ಯಾಗ ಮತ್ತು ಬಲಿದಾನಗಳಿಂದ ನಮಗೆ ಈ ಪವಿತ್ರ ಸ್ವಾತಂತ್ರ್ಯ ಲಭಿಸಿದೆ. ಇಂದು 150 ಕೋಟಿ ಭಾರತೀಯರು ನೆಮ್ಮದಿಯ ಜೀವನ ನಡೆಸಲು ಈ ಸ್ವಾತಂತ್ರ್ಯವೇ ಬುನಾದಿಯಾಗಿದೆ. ಈ ಸ್ವಾತಂತ್ರ್ಯವನ್ನು ಕಾಪಾಡಿ, ದೇಶದ ಐಕ್ಯತೆ, ಅಖಂಡತೆ ಹಾಗೂ ಪ್ರಗತಿಯನ್ನು ಎತ್ತಿಹಿಡಿಯುವುದೇ ಪ್ರತಿಯೊಬ್ಬ ಪ್ರಜೆಯ ಪರಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ” ಎಂದು ಸ್ವಾತಂತ್ರ್ಯದ ಮಹತ್ವವನ್ನು ಸ್ಮರಿಸಿದರು.
ಈ ಶುಭ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ಪೊಲೀಸ್ ಸಿಬ್ಬಂದಿ, ಪಂಚಾಯತ್ ಆಡಳಿತ ಮಂಡಳಿಯ ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

