ಡಾ. ಶೇಖ್ ವಹಿದ್ ದಾವೂದ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ, ಉತ್ಸಾಹ ಹಾಗೂ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ನಡೆದ ಈ ಸಮಾರಂಭದಲ್ಲಿ ಮೊಹಮ್ಮದ್ ರಿಜ್ವಾನ್ ಹಂಝ ಧ್ವಜಾರೋಹನಗೈದರು , ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಹರಿಪ್ರಸಾದ್ ರೈ ಅವರು”ಸ್ವಾತಂತ್ರ್ಯ ಎಂಬುದು ನಮಗೆ ಸುಲಭವಾಗಿ ಸಿಕ್ಕಿದ್ದಲ್ಲ. ಲಕ್ಷಾಂತರ ದೇಶಪ್ರೇಮಿಗಳ, ಮಹಾತ್ಮರ ತ್ಯಾಗ ಮತ್ತು ಬಲಿದಾನಗಳ ಫಲವಾಗಿ ಇಂದು ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಈ ದಿನ ಅವರ ಅಮರ ಸೇವೆಯನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ” ಎಂದು ಅಧ್ಯಕ್ಷರು ಹೇಳಿದರು.

ಟ್ರಸ್ಟ್‌ನ ಅಧ್ಯಕ್ಷ ಡಾ. ಶೇಖ್ ವಹಿದ್ ದಾವೂದ್ ಮಾತನಾಡಿ ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ಭಾರತ ದೇಶದಲ್ಲಿ ಪ್ರೀತಿ, ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಸಮಾಜದಲ್ಲಿ ಎಲ್ಲರೂ ಒಂದಾಗಿ ಬಾಳಿದಾಗ ಮಾತ್ರ ಸಮೃದ್ಧ ಭಾರತ ನಿರ್ಮಾಣ ಸಾಧ್ಯ” ಎಂದು ಆಶಯ ವ್ಯಕ್ತಪಡಿಸಿದರು.

ಸ್ವಾಸಂತ್ರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹಾಗೂ ಪ್ರತಿಭೆಯನ್ನು ಹೊರತರಲು ವಿವಿಧ ಹಂತದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು ಅತ್ಯುತ್ತಮ ಸಾಧನೆ ತೋರಿ ವಿಜೇತರಾದ ವಿದ್ಯಾರ್ಥಿಗಳಿಗೆ ವೇದಿಕೆಯ ಮೇಲೆ ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು ಟ್ರಸ್ಟ್ ವತಿಯಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡ ಗಣ್ಯರನ್ನು ಗೌರವಿಸಲಾಯಿತು ಮಧ್ಯಾಹ್ನದ ಊಟದ ವ್ಯವಸ್ಥೆಯು ಏರ್ಪಡಿಸಲಾಗಿತ್ತು ಈ ಸಂದರ್ಭದಲ್ಲಿ ಮೊಹಮ್ಮದ್ ಅತೀಕ್ ಆಕರ್ಷಣ್ ಸಾಧಿಕ್ ಮೊಹಮ್ಮದ್ ಮಸೂದ್ ಅಹಮದ್ ನಿಹಾಲ್ ಭಾಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು


