×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ | ಆದರ್ಶ ಆಸ್ಪತ್ರೆಯಲ್ಲಿ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ 125 ಯೂನಿಟ್

ಆದರ್ಶ ಆಸ್ಪತ್ರೆ ಉಡುಪಿ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗ, ಸೋಷಿಯಲ್‌ ಡೆಮಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ಉಡುಪಿ, ಉಡುಪಿ ಬಸವ ಸಮಿತಿ (ರಿ.) ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ.), ಎಚ್ ಡಿ ಎಫ್ ಸಿ ಬ್ಯಾಂಕ್ ಪ್ರಧಾನ ಶಾಖೆ ಉಡುಪಿ ಇವರ ಸಹಯೋಗದೊಂದಿಗೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಇಂದು ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಜಿ.ಎಸ್. ಚಂದ್ರಶೇಖರ್ ಅವರು, ರಕ್ತಕ್ಕೆ ಪರ್ಯಾಯವಾಗಿ ಯಾವುದೇ ಕೃತಕ ವಸ್ತುವಿಲ್ಲ. ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಸೇರಿದಂತೆ ವಿವಿಧ ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಎದುರಾಗುತ್ತದೆ. ಆದ್ದರಿಂದ ಆರೋಗ್ಯವಂತ ನಾಗರಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಘಟಕದ ಮುಖ್ಯಸ್ಥರಾದ ಡಾ. ವೀಣಾ ಅವರು ಮಾತನಾಡಿ, ರಕ್ತದಾನ ಮಾಡುವುದರಿಂದ ಯಾವುದೇ ರೀತಿಯ ಭಯ ಅಥವಾ ತಪ್ಪು ಕಲ್ಪನೆಗಳಿಗೆ ಒಳಗಾಗದೆ ಅರ್ಹ ಹಾಗೂ ಆರೋಗ್ಯವಂತರು ನಿಯಮಿತವಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದರು.

ಎಸ್‌ ಡಿ ಪಿ ಐ ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಮಹಮ್ಮದ್ ಅಶ್ರಫ್ ಬಾವ ಅವರು ಮಾತನಾಡಿ, ರಕ್ತದಾನವು ಅತ್ಯಂತ ಮಹತ್ವದ ಮಾನವೀಯ ಸೇವೆಯಾಗಿದ್ದು, ಒಬ್ಬ ವ್ಯಕ್ತಿ ನೀಡುವ ರಕ್ತ ಮತ್ತೊಬ್ಬರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಮಾಜದಲ್ಲಿ ಸ್ವಯಂ ಪ್ರೇರಿತ ರಕ್ತದಾನದ ಕುರಿತು ಇನ್ನಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಆದರ್ಶ ಆಸ್ಪತ್ರೆಯ ಸಿಇಒ ವಿಮಲಾ ಚಂದ್ರಶೇಖರ್, ಹೆಚ್‌ ಡಿ ಎಫ್‌ ಸಿ ಉಡುಪಿ ಪ್ರಧಾನ ಶಾಖೆಯ ಮುಖ್ಯ ವ್ಯವಸ್ಥಾಪಕರಾದ ವಿಶ್ವಮೂರ್ತಿ ಪಡುಬಳ್ಳಿ, , ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ.), ಉಡುಪಿ ಜಿಲ್ಲೆ ಅಧ್ಯಕ್ಷರಾದ ಪ್ರಕಾಶ್ ಸಜ್ಜನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು. ರೀಮಾ ಧನ್ಯವಾದವಿತ್ತರು.

ಶಿಬಿರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ವಿಶೇಷ ಗಮನ ಸೆಳೆಯಿತು. ವಿವಿಧ ವರ್ಗದ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಹೊಣೆಗಾರಿಕೆಯನ್ನು ಮೆರೆದರು. ಶಿಬಿರದಲ್ಲಿ ಸುಮಾರು 125 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Leave a Reply

Your email address will not be published. Required fields are marked *