×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 1ರಂದು ಕಾಲಾವಧಿ ಹೂವಿನ ಪೂಜೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 1ರ ಮಂಗಳವಾರ ಮದ್ಯಾಹ್ನ 3 ಗಂಟೆಗೆ ಸರಿಯಾಗಿ ಕಾಲಾವಧಿ ಹೂವಿನ ಪೂಜೆ ನಡೆಯಲಿದೆ, ಅದೇ ದಿನ ಸಂಜೆ 7 ಗಂಟೆಗೆ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಮತ್ತು ಸೆಪ್ಟೆಂಬರ್ 11ರ ಶುಕ್ರವಾರ ರಾತ್ರಿ ಗಂಟೆ 7:30ಕ್ಕೆ ಸರಿಯಾಗಿ ಕೊಪ್ಪಲಂಗಡಿ ಶ್ರೀ ವಾಸುದೇವ ಸ್ವಾಮಿ ದೇವಸ್ಥಾನದಲ್ಲಿ ದೇವಳದ ಭಂಡಾರದ ವತಿಯಿಂದ ಹೂವಿನ ಪೂಜೆ ಜರಗಲಿದೆ.

ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಶ್ರೀದೇವರ ಪ್ರಸಾದವನ್ನು ಪಡೆದು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಮತ್ತು ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *