×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಟ್ಟು ಬೀಚ್ ಬಳಿ ಕಡಲ್ಕೊರೆತ ಸ್ಥಳಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಬೀಚ್ ಬಳಿ ಕಡಲ್ಕೊರೆತ ಉಂಟಾಗಿದ್ದು ಇಂದು ದಿನಾಂಕ 31-08-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ 80 ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಡಲ್ಕೊರೆತ ಪರಿಶೀಲನೆ ನಡೆಸಿದ ಶಾಸಕರು ತಕ್ಷಣವೇ ತುರ್ತು ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕೋಟೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಯೋಗೀಶ್, ಮಾಜಿ ಸದಸ್ಯರಾದ ರಮೇಶ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕೋಟೆ ಶಕ್ತಿ ಕೇಂದ್ರದ ಹರ್ಷಿತ್, ಏಣಗುಡ್ಡೆ ಶಕ್ತಿ ಕೇಂದ್ರ ಸಂತೋಷ್, ಸ್ಥಳೀಯರಾದ ಸತ್ಯನಾರಾಯಣ ರಾವ್, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಸಹಾಯಕ ಅಭಿಯಂತರಾದ ಪ್ರಶಾಂತ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *