×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಚೆಸ್ ಪಂದ್ಯಾಟ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಯುವಜನತೆಯಲ್ಲಿ ಏಕಾಗ್ರತೆ ಹಾಗೂ ಕಾರ್ಯತಂತ್ರ ನೈಪುಣ್ಯತೆಯನ್ನು ಹೆಚ್ಚಿಸಲು ಅಲ್ಪಸಂಖ್ಯಾತ ಮೋರ್ಚಾ ವತಿಯಿಂದಬೃಹತ್ ಚೆಸ್ ಪಂದ್ಯಾವಳಿಯನ್ನು ಕಾಪು ಹಳೆ ಮಾರಿಗುಡಿ ಸಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಅಂಗವಾಗಿ 1ರಿಂದ 12ನೇ ತರಗತಿಯ ಮಕ್ಕಳಿಗಾಗಿ ಚೆಸ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು.

ಚೆಸ್ ಆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ .ಯುವ ಪೀಳಿಗೆಯಲ್ಲಿ ಶಿಸ್ತು ಮತ್ತು ಕಾರ್ಯತಂತ್ರದ ಚಿಂತನೆಯನ್ನು ಬೆಳೆಸಲು ಕ್ರೀಡಾ ಮನೋಭಾವ ಹೆಚ್ಚಿಸಲು . ಪ್ರತಿಭೆಗೆ ಪ್ರೋತ್ಸಾಹನೀಡಲು ಇಂತಹ ಪಂದ್ಯಾವಳಿಗಳು ಅತ್ಯಂತ ಸಹಕಾರಿ” ಎಂದು ಅಭಿಪ್ರಾಯಪಟ್ಟರು.

ಕಾಪು ಮಂಡಲ ಅಧ್ಯಕ್ಷರಾದ ಜಿತೇಶ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು

ಕಾರ್ಯಕ್ರಮದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಮೆಂಡನ್, ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷ ರುಡಲ್ಪ್ ಡಿಸೋಜ ಅಲ್ಪ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶೇಖ್ ಆಸೀಫ್ ಹಾಗೂ ಮೊಹಮ್ಮದ್ ಅಪ್ಸರ್, ಕಾಪು ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ನಜೀರ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶಿಲ್ಪಾ ಜೆ ಸುವರ್ಣ, ರಾಜ್ಯ ಕಾರ್ಯದರ್ಶಿ ಜೆಶೆಲ್ ಡಿಸೋಜ, ಚೆಸ್ ಮಾಸ್ಟರ್ ವಿಕ್ರಂ, ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ನವೀನ್ ಡಿಸೋಜ ನೆರವೇರಿಸಿದರು.

Leave a Reply

Your email address will not be published. Required fields are marked *