×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಲಬಾರ್ ಗೋಲ್ಡ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನ ಉಡುಪಿ ಮಳಿಗೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾ‌ರ್ ಅವರು ಧ್ವಜಾರೋಹಣ ನೆರವೇರಿಸಿ, ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು

ಕರ್ನಾಟಕ ರಾಜ್ಯೋತ್ಸವ ಹಾಗೂ ಮಲಬಾರ್ ದಿನದ ಅಂಗವಾಗಿ ಅಜ್ಜರಕಾಡು ಪಾರ್ಕ್‌ನಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಲಾಯ, ಹರೀಶ್ ಎಂ.ಜಿ., ರಾಘವೇಂದ್ರ, ಸುಧಾಕ‌ರ್, ಮಾರುಕಟ್ಟೆ ಉಸ್ತುವಾರಿ ತಂಝೀಮ್ ಶಿರ್ವ, ಗ್ರಾಹಕರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *