ಉಡುಪಿ: ಸಹಕಾರ ವ್ಯವಸ್ಥೆ ಇಂದಿನದಲ್ಲ. ದೇಶದ ಸ್ವಾತಂತ್ರ್ಯಾನಂತರದಿಂದಲೇ ಸಹಕಾರ ಕ್ಷೇತ್ರಕ್ಕೆ ಭದ್ರ ಬುನಾದಿ ಹಾಕಲಾಗಿದೆ. ದೇಶದ ಮೊದಲ ಪ್ರಧಾನಿ ಸಹಕಾರ ಚಳವಳಿಗೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಹಕಾರ ಸಂಘಗಳು ಇಲ್ಲದಿದ್ದರೆ ಸಮಾಜದ ಬಡವರು ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಆರ್ಥಿಕ ಸಂಕಷ್ಟ ಎದುರಿಸಬೇಕಾಗುತ್ತಿತ್ತು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಉಡುಪಿ: ನವೀಕೃತಗೊಂಡ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕಾರ್ಯಾಲಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು
ಕಾರ ಸಂಘಗಳು ಕೇವಲ ದಾಖಲೆಗಳನ್ನು ನೋಡುವುದಿಲ್ಲ, ಬದಲಾಗಿ ವ್ಯಕ್ತಿಯ ಹಿನ್ನೆಲೆ ಹಾಗೂ ಆತನ ಪರಿಸ್ಥಿತಿಯನ್ನು ಅರಿತು ವ್ಯವಹಾರ ನಡೆಸುತ್ತವೆ. ಸಣ್ಣ ವ್ಯಾಪಾರಿಗಳಿಗೆ ಸಹಕಾರಿ ಸಂಘಗಳು ಆರ್ಥಿಕ ನೆರವು ನೀಡುವ ಮೂಲಕ ಬೆಂಬಲವಾಗಿ ನಿಲ್ಲುತ್ತವೆ. ಈ ವ್ಯವಸ್ಥೆ ಇಲ್ಲದಿದ್ದರೆ ರೈತರು ಹಾಗೂ ವ್ಯಾಪಾರಿಗಳು ಆರ್ಥಿಕ ನೆರವಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದರು.

ಸಹಕಾರ ಸಂಘಗಳಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸ ಆಗಬೇಕಿದೆ. ಆದರ್ಶ ಸಹಕಾರಿ ಸಂಘವು ಕಳೆದ 39 ವರ್ಷಗಳಿಂದ ತನ್ನ ಅಸ್ತಿತ್ವ ಮತ್ತು ಸೇವೆಯನ್ನು ಉಳಿಸಿಕೊಂಡು ಬಂದಿರುವುದು ಶ್ಲಾಘನೀಯ. ಹಿಂದಿನ ಹಿರಿಯರು ಹಾಕಿಕೊಟ್ಟ ಭದ್ರ ಬುನಾದಿಯನ್ನು ಮುಂದುವರಿಸಿಕೊಂಡು ಹೋಗಬೇಕು. ಈ ಬ್ಯಾಂಕ್ ಮುಂದಿನ ಪೀಳಿಗೆಗೂ ಆದರ್ಶವಾಗಿ ಬೆಳೆಯಲಿ ಎಂದು ಆಶಿಸಿದರು.

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಎ. ಸುವರ್ಣ ಅವರು ಸಮಾಂಭದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸಂಘದ ಅಧ್ಯಕ್ಷರಾದ ರೆನೋಲ್ಡ್ ಪ್ರವೀಣ್ ಕುಮಾರ್ ಕುಮಾರ್ ಅತಿಥಿಗಳನ್ನು ಸ್ವಾಗತಿಸಿದರು, ಉಪಾಧ್ಯಕ್ಷ ಜಯನ್ ಮಲ್ಪೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ. ಎ. ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ದಿನಕರ ಹೇರೂರು, ಉದ್ಯಮಿ ಪುರುಷೋತ್ತಮ ಶೆಟ್ಟಿ, ನಿರ್ದೇಶಕರುಗಳಾದ ಕೆ. ಕೃಷ್ಣಮೂರ್ತಿ ಆಚಾರ್ಯ, ಬಿ.ಎಲ್. ನರಸಿಂಹಸ್ವಾಮಿ, ಹರಿದಾಸ ಭಟ್, ಶಾಮ ಶೆಟ್ಟಿ, ಶೇಖರ ಶೆಟ್ಟಿ, ಜಿತೇಶ್ ಕುಮಾರ್, ಮಹಮ್ಮದ್ ರಫೀಕ್ ಖಾನ್, ರವಿಪ್ರಕಾಶ್, ಅನಂತ ನಾಯ್ಕ, ಸುಲೋಚನ ದಾಮೋದರ್, ವಿನಯ ಪ್ರಕಾಶ್, ಕಾರ್ಯದರ್ಶಿ ಜಲೇಂದ್ರ ಕೋಟ್ಯಾನ್ ಉಪಸ್ಥಿತರಿದ್ದರು.ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರ್ವಹಣೆ ಮಾಡಿದರು.

