×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಪ್ಪುಂದ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ 73ನೇ ಅಖಿಲ ಭಾರತ ಸಹಕಾರಿ ಸಪ್ತಾಹ; ಪ್ರತಿಭಾ ಪುರಸ್ಕಾರ ಮತ್ತು ಗೌರವ ಧನ ವಿತರಣೆ

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ (ನಿ.) ಇದರ ಸಂಯುಕ್ತ ಆಶ್ರಯದಲ್ಲಿ 73ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಗೌರವ ಧನ ವಿತರಣಾ ಸಮಾರಂಭವುಶ್ರೀ ಕೃಷ್ಣಲಲಿತ ಕಲಾಮಂದಿರ ನಾಗೂರು ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ರವಿರಾಜ ಹೆಗ್ಡೆ ಅವರು, “ಸಹಕಾರಿ ಸಂಘಗಳು ಕೇವಲ ಆರ್ಥಿಕ ವ್ಯವಹಾರಕ್ಕೆ ಸೀಮಿತವಾಗದೆ, ಸಮಾಜದ ಏಳಿಗೆ ಮತ್ತು ರೈತರ ಸ್ವಾವಲಂಬನೆಗೆ ಶ್ರಮಿಸುತ್ತಿವೆ. ನಮ್ಮ ಸಂಘದ ಸದಸ್ಯರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವುದು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ” ಎಂದರು.

ನಾಗೂರಿನಲ್ಲಿ ಬುಧವಾರ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಜಿಲ್ಲಾ ಸಹಕಾರಯೂನಿಯನ್ ಸಹಯೋಗದಲ್ಲಿ 73ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರಂಭ ಉದ್ಘಾಟಿಸಿ ಮಾತನಾಡಿದರು

ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ, ಗಣನಾಥ ಶೆಟ್ಟಿ ಸಾರ್ವಜನಿಕ ಖಾಸಗಿ ಸಹಕಾರಿ ಪಾಲುದಾರಿಕೆ ಮಾತನಾಡಿದರು. ಜಿಲ್ಲಾ ಸಹಕಾರ ಸಂಘದ ಸಿಇಒ ಅನೂಷಾ, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ ಕುಮಾರ್, ಉಪಾಧ್ಯಕ್ಷ ಮಂಜು ದೇವಾಡಿಗ, ನಿರ್ದೇಶಕರಾದ ನಿರ್ದೇಶಕರಾದ ಉದಯ ಕುಮಾರ್ ಶೆಟ್ಟಿ , ಈಶ್ವರ, ಮೋಹನ ಪೂಜಾರಿ, ಬಿ.ಎಸ್.ಸುರೇಶ ಶೆಟ್ಟಿ, ಗುರುರಾಜ ಹೆಬ್ಬಾರ್, ಭರತ್ ದೇವಾಡಿಗ, ಹೂವ ನಾಯ್ಕ, ಪ್ರಕಾಶ ಎನ್.ಪೂಜಾರಿ, ರಾಜೇಶ ದೇವಾಡಿಗ,, ದಿನೀತಾ ಶೆಟ್ಟಿ, ಲೀಲಾ ಕೆ.ಪೂಜಾರಿ, ರಂಜಿತ ಕುಮಾರ್ ಶೆಟ್ಟಿ, ಸಂಘದ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್.ಪೈ. ಮತ್ತಿತರರಿದ್ದರು. ಪಡುಕೋಣಿ ಕಾರ್ಯಕ್ರಮ ನಿರೂಪಿಸಿದರು. ಸುಬ್ರಹಣೆ ಹಿರಿಯ ಪ್ರಬಂಧಕ ಚಂದಯ್ಯ ಶೆಟ್ಟಿ ವಂದಿಸಿದರು

Leave a Reply

Your email address will not be published. Required fields are marked *