×
Our website is made possible by displaying online advertisements to our visitors. Please consider supporting us by whitelisting our website.
  • 9880645340

73ನೇ ಅಖಿಲ ಭಾರತಸಹಕಾರ ಸಪ್ತಾಹ ಸಮಾರಂಭ”ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ., ವತಿಯಿಂದರೈತರಿಗೆ ಕೃಷಿ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಸಹಕಾರ ರತ್ನವಿಜೇತರಿಗೆ ಸನ್ಮಾನ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಾಗೂ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವತಿಯಿಂದ ರೈತರಿಗೆ ಕೃಷಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಬುಧವಾರ ನಡೆಯಿತು.ನಕ್ಷೆಗಳನ್ನು ನೋಡಿ

ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಕೃಷಿಯಿಂದ ಸಮಾಜವನ್ನು ಬಲಿಷ್ಠಗೊಳಿಸು ವುದರ ಜೊತೆಗೆ ಕೃಷಿಕರಿಗೆ ಅಗತ್ಯ ಪ್ರೋತ್ಸಾಹ ಮತ್ತು ಆರ್ಥಿಕ ನೆರವು ನೀಡುವ ಮೂಲಕ ಕೃಷಿ ಚಟುವಟಿಕೆಗಳಿಗೆ ನಿರಂತರ ಪ್ರೋತ್ಸಾಹವನ್ನು ಸಹಕಾರಿ ಸಂಸ್ಥೆಗಳು ಮಾಡುತ್ತಿವೆ ಎಂದು ಹೇಳಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಕೃಷಿ ಮತ್ತು ಮೀನುಗಾರಿಕೆ ನಮ್ಮ ಕರಾವಳಿ ಭಾಗದ ಪ್ರಮುಖ ದೊಡ್ಡ ಉದ್ಯಮಗಳಾಗಿವೆ. ಈ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ. ಕೃಷಿಕರು ಮತ್ತು ಮೀನುಗಾರರಿಗೆ ಆರ್ಥಿಕ ನೆರವು, ಸಾಲ ಸೌಲಭ್ಯ ಹಾಗೂ ಅಗತ್ಯ ಸಹಕಾರ ಒದಗಿಸುವಲ್ಲಿ ಸಹಕಾರಿ ಸಂಸ್ಥೆಗಳು ಮಹತ್ವದ ಪಾತ್ರ ವಹಿಸುತ್ತಿವೆ.

ಪಡುಬಿದ್ರಿ ವ್ಯವಸಾಯಿ ಸೊಸೈಟಿಯ ಅಧ್ಯಕ್ಷ ವೈ.ಸುಧೀರ್ ಕುಮಾರ್ ಮಾತನಾಡಿ, ಪಡುಬಿದ್ರಿ ವ್ಯವಸಾಯಿಕ ಸಂಘದ ಮೂಲಕ ರೈತರಿಗೆ ನಿರಂತರ ಸಹಕಾರ ಮಾಡುವ ಮೂಲಕ ಕೃಷಿಕರಿಗೆ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದೆ. ಇದರೊಂದಿಗೆ ಸಾಮಾಜಿಕ ಕಾರ್ಯದಲ್ಲೂ ಸಂಸ್ಥೆನ ಕೈಜೋಡಿಸಿದೆ ಎಂದರು.

ಸನ್ಮಾನ: ಸಹಕಾರ ರತ್ನ ಪ್ರಶಸ್ತಿ ಸ್ವೀಕರಿಸಿದ ಪಡುಬಿದ್ರಿ ವ್ಯವಸಾಯಿ ಸೊಸೈಟಿಯ ಅಧ್ಯಕ್ಷ ವೈ.ಸುಧೀರ್, ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ನಿರ್ದೇಶಕ ಸತೀಶ್ ಕುಂದರ್, ಹೆಬ್ರಿಯ ಬೆಳ್ವೆ ವ್ಯವಸಾಯ ಸಹಕಾರಿ ಸಂಘದ ಎಸ್.ಜಯರಾಮ ಶೆಟ್ಟಿ, ಉದ್ಯಾವರ ಪಿತ್ರೋಡಿ ಮೀನುಗಾರಿಕಾ ಮೀನು ಉತ್ಪನ್ನ ಸಾಮಾಗ್ರಿಗಳ ಸಹಕಾರಿ ಸಂಘದ ಗಿರೀಶ್ ವಿ.ಸುವರ್ಣ ಅವರನ್ನು ಸನ್ಮಾನಿಸಲಾಯಿತು.

ವಿತರಣೆ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ವತಿಯಿಂದ ೧೯೪ ರೈತರಿಗೆ ತಲಾ ರೂ. 3000 ಕೃಷಿ ಪ್ರೋತ್ಸಾಹ ಧನ ಹಾಗೂ ವೈದ್ಯಕೀಯ ಸಹಾಯ ಧನ, ದೈನಿಕ ಠೇವಣಿ ಸಂಗ್ರಹಗಾರರಿಗೆ ಬ್ಯಾಗ್‌ಗಳನ್ನು ವಿತರಿಸಲಾಯಿತು.

ಉಡುಪಿ ಜಿಲ್ಲಾ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಗಂಗಾಧರ ಶೆಟ್ಟಿ, ಅನಿಲ್ ಕುಮಾರ್, ಸುರೇಶ್ ರಾವ್, ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್, ಕುಂದಾಪುರ ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜೆ.ಸುಧೀರ್ ಕುಮಾರ್, ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್, ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ಪಡುಬಿದ್ರಿ ವ್ಯವಸಾಯಿಕ ಸೊಸೈಟಿಯ ಉಪಾಧ್ಯಕ್ಷ ಗುರುರಾಜ್ ಪೂಜಾರಿ ವಂದಿಸಿದರು.

Leave a Reply

Your email address will not be published. Required fields are marked *