×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬೀಜಾಡಿ73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭಮೀನುಗಾರರ ಸಹಕಾರಿ ಸಂಘ (ನಿ), 4ವತಿಯಿಂದ ಮಹಿಳಾ ಮೀನುಗಾರರ ಸ್ವ-ಸಹಾಯ ಗುಂಪುಗಳಿಗೆ ಸಾಲ ವಿತರಣೆ

ಕುಂದಾಪುರ, ನ.20: ಯಾವ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೂ ಕಡಿಮೆ ಇಲ್ಲದೇ ಸಹಕಾರಿ ಸಂಘಗಳು ಸಾಲ ಸೌಲಭ್ಯ ನೀಡುವ ಮೂಲಕ ಅಭಿವೃದ್ಧಿಗೊಂಡು ಜನರಿಂದ ಜನರಿಗಾಗಿ ಜನರಿಗೋಸ್ಕರ ಸೇವೆ ನೀಡಿ ಬೆಳೆಯುತ್ತಿದೆ. ಮೀನು ಗಾರರಿಗೆ ಸರಕಾರ ನೀಡುವ ಸವಲತ್ತುಗಳನ್ನು ಮತ್ತು ವಿಮಾ ಯೋಜನೆ ಮಾಹಿತಿಗಳನ್ನು ಇಲಾಖೆಯು ಸಂಘದ ಗ್ರಾಹಕರಿಗೆ ಮತ್ತು ಮೀನುಗಾರರಿಗೆ ಸಮರ್ಪಕವಾಗಿ ನೀಡುವ ಕೆಲಸವನ್ನು ಸರಿಯಾಗಿ ಮಾಡಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಡಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ, ಬೀಜಾಡಿ ಮೀನುಗಾರರ ಸಹಕಾರಿ ಸಂಘ ಬೀಜಾಡಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ಕೋಟೇಶ್ವರ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಜರಗಿದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಾಗೂ ಬೀಜಾಡಿ ಮೀನುಗಾರರ ಸಹಕಾರಿ ಸಂಘದ ವತಿಯಿಂದ ಮಹಿಳಾ ಮೀನುಗಾರರ ಸ್ವ-ಸಹಾಯ ಗುಂಪುಗಳಿಗೆ ಸಾಲ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಮಹಿಳಾ ಮೀನುಗಾರರ ಸ್ವಸಹಾಯ ಸಂಘಗಳಿಗೆ ಸಾಲ ವಿತರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಸಂಪನ್ಮೂಲ ವ್ಯಕ್ತಿ ಶ್ರೀಧರ್‌ ಪಿ.ಎಸ್‌. ಮಹಿಳೆಯರು, ಯುವ ಜನರು ಮತ್ತು ಸಮಾಜದ ಅಂಚಿನ ವರ್ಗಗಳು ಸಹಕಾರ ಕ್ಷೇತ್ರದಲ್ಲಿ ಪಾಲ್ಗೊಳ್ಳುವಿಕೆಯ ಕುರಿತು ಮಾಹಿತಿ ನೀಡಿದರು.

ಉಡುಪಿ ಜಿಲ್ಲಾ ಮೀನುಗಾರಿಕಾ ಜಂಟಿ ನಿರ್ದೇಶಕ ಬಿ.ವಿ.ಕುಮಾರ ಸ್ವಾಮಿ, ಸಹಕಾರಿ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆ‌ರ್, ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕ ಎಂ.ಎಂ. ಆನಂದ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಜೆ.ಸುಧೀರ್ ಕುಮಾರ್, ಮೀನುಗಾರಿಕಾ ಸಹಾಯಕ ನಿರ್ದೇಶಕಿ ಆಶಾ, ಸಹಕಾರಿ ಧುರೀಣರಾದವೈ.ಸುಧೀ‌ರ್ ಕುಮಾ‌ರ್ ಶೆಟ್ಟಿ ಅರುಣ್ ಕುಮಾ‌ರ್ ಶೆಟ್ಟಿ, , ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಉಪಾಧ್ಯಕ್ಷ ನಾಗೇಶ್‌ ಉಪಸ್ಥಿತರಿದ್ದರು.

ಸಂದರ್ಭ ಮೀನುಗಾರಿಕೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಮೀನುಗಾರಿಕಾ ಇಲಾಖೆಯ ಸಂಕಷ್ಟ ಪರಿಹಾರ ವಿಮಾ ನಿಧಿ ವಿತರಣೆ, ಮಹಿಳಾ ಮೀನುಗಾರ ಸ್ವಸಹಾಯ ಸಂಘಗಗಳಿಗೆ ಸಾಲ ವಿತರಣೆ, ಮಹಿಳಾ ಮೀನುಗಾರರಿಕೆ ಮೀನು ಸಂರಕ್ಷಣೆಯ ಪ್ರೀಜರ್ ಕೊಡುಗೆ, ಮೀನುಗಾರರಿಗೆ ಲೈಫ್ ಜಾಕೇಟ್ ವಿತರಣೆ, ಶೈಕ್ಷಣಿಕ ಮತ್ತು ಸಹಾಯ ಹಸ್ತದ ನೆರವನ್ನು ವಿತರಿಸಲಾಯಿತು. ಸಹಕಾರಿ ರತ್ನ ಇಂದ್ರಾಳಿ ಜಯಕರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ಕಾಂಚನ್ ಸ್ವಾಗತಿಸಿದರು. ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ವಂದಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *