
ಸುರತ್ಕಲ್ : ಟೋಲ್ ಗೇಟ್ ಹೋರಾಟ ಸಮಿತಿಯಿಂದ ಅ.18ರಂದು ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟಕ್ಕೂ ಮುನ್ನ ಪೊಲೀಸ್ ಬಲ ಪ್ರಯೋಗ ನಡೆದಿದೆ ಎನ್ನಲಾಗಿದೆ. ಈ ಕುರಿತು ಸಾಮಾಜಿಕ ಜಾಲಾತಾಣದಲ್ಲಿ ಬರೆದುಕೊಂಡಿರುವ ಹೋರಾಟಗಾರ ಮುನೀರ್ ಕಾಟಿಪಳ್ಳ, ಮಧ್ಯರಾತ್ರಿ ಪೊಲೀಸರನ್ನು ಹೋರಾಟಗಾರರ ಮನೆಗಳಿಗೆ ಕಳುಹಿಸುತ್ತೀರಾ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತರೆ ? ಮಹಿಳಾ ಹೋರಾಟಗಾರರ ಮನೆಗೂ ಕಾಳರಾತ್ರಿ “ಗಂಡಸು” ಪೊಲೀಸರ ದಂಡು!! ಅದಕ್ಕೆಲ್ಲ ಜನ ಹೆದರುವ ಕಾಲ ಮುಗಿದಿದೆ. ತುಳುನಾಡಿನ ಮುಂದೆ ಬೆತ್ತಲಾಗುತ್ತಿದ್ದೀರಿ ಬಿಜೆಪಿಗರೆ ಎಚ್ಚರ ಎಂದಿದ್ದಾರೆ.

