×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ _2898.64 ಕೋಟಿ ರೂಪಾಯಿಗಳ ವಿವಿಧ ಕಾಮಗಾರಿ. ಶಾಸಕ ಲಾಲಾಜಿ ಮೆಂಡನ್.

ಕಾಪು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ನಾಲ್ಕೂವರೆ ವರ್ಷದಲ್ಲಿ ೨೮೯೮.೬೮ ಕೋಟಿ ರೂಪಾಯಿಗಳ ಕಾಮಗಾರಿ ಮಂಜೂರಾತಿ ಆಗಿದೆ ಎಂದು ಮಂದಾರ ಸಭಾಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು. ಕಾಪು ಕ್ಷೇತ್ರದ ಒಟ್ಟು ೨೬ ಗ್ರಾಮ ಪಂಚಾಯತ್ ಗಳಲ್ಲಿ ಜಲಜೀವನ್ ಮಿಶಿನ್ ಯೋಜನೆಯಲ್ಲಿ ೯೮.೪೬ ಕೋಟಿ ರೂ. ಬಿಡುಗಡೆ ಗೊಳಿಸಲಾಗಿದೆ, ಈಗಾಗಲೆ ಕಾಮಗಾರಿ ಪ್ರಾರಂಭಗೊಂಡ ಹೆಜಮಾಡಿ ಮೀನುಗಾರಿಕಾ ಬಂದರು ,ಸಮುದ್ರ ತಡೆಗೋಡೆ ನಿರ್ಮಾಣ, ವಿಜ್ಞಾನ ಸಂಶೋಧನ ಕೇಂದ್ರ, ಪಾಲಿಟೆಕ್ನಿಕ್ ಕಾಲೇಜು, ಮಿನಿ ವಿಧಾನ ಸೌಧ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಆರೋಗ್ಯ ಕೇಂದ್ರಗಳ ಮೇಲ್ದರ್ಜೆ, ಅಗ್ನಿಶಾಮಕ ದಳದ ಮಂಜೂರಾತಿ ಸಹಿತ ಹತ್ತು ಹಲವು ಯೋಜನೆ ಗಳ ಅನುಷ್ಟಾನ ಕಾಪು ಕ್ಷೇತ್ರದಲ್ಲಿ ಮೊದಲ್ಗೊಂಡಿದೆ ಎಂದುಕಾಪು ಶಾಸಕ ಲಾಲಾಜಿ ಮೆಂಡನ್ ಹೇಳಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್,ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕ್ರಷ್ಣ ರಾವ್,ಸಂದೀಪ್ ಶೆಟ್ಟಿ, ಪ್ರಾಣೇಶ್ ಹೆಜ್ಮಾಡಿ, ಸುಧಾಮ ಶೆಟ್ಟಿ ಮೊದಲಾದವರಿದ್ದರು. 

Leave a Reply

Your email address will not be published. Required fields are marked *