
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾಪು ಪ್ರೆಸ್ ಕ್ಲಬ್‌ನಲ್ಲಿ ದೀಪಾವಳಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ವಿಷೇಶವಾಗಿ ಜನಪದ ವಿದ್ವಾಂಸ ಕೆ.ಎಲ್.ಕುಂಡಂತಾಯ ಮುಖ್ಯ ಅತಿಥಿ ಯಾಗಿ ಭಾಗವಹಿಸಿ ದೀಪಾವಳಿ ಆಚರಣೆ ಬಗ್ಗೆ ಉಪನ್ಯಾಸ ನೀಡಿದರು ಮುಖ್ಯ ಅತಿಥಿಯಾಗಿ ಆಗಮಿಸಿದ ಉದ್ಯಮಿ, ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್ ಮಾತನಾಡಿ ಹಿಂದಿನ ದೀಪಾವಳಿಯಲ್ಲಿ ಬಡತನದೊಂದಿಗೆ ಸಂತಸವಿತ್ತು.ಇಂದು ಜನರು ಸಿರಿವಂತರಾದರೂ ದೀಪಾವಳಿ ಆಚರಣೆಗಳು ಮಹತ್ವ ಇಲ್ಲದಂತಾಗಿದೆ. ಎಂದರು ಆವರಣದ ಸುತ್ತಲೂ ದೀಪ ಗಳನ್ನು ಹಚ್ಚಿದರು. ಸದಸ್ಯರು ಪಟಾಕಿ,ದುರುಸು ಬಾಣಗಳನ್ನು ಹಚ್ಚಿ ಸಂಭ್ರಮಿಸಿದರು.ಈ ಸಂದರ್ಭ ಕಾಪು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುರೇಶ್ ಎರ್ಮಾಳು, ಕಾರ್ಯದರ್ಶಿ ಪುಂಡಲೀಕ ಮರಾಠ, ಪತ್ರಕರ್ತ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.ಪತ್ರಕರ್ತ ರಾಜೇಶ್ ಮಂಜೂರು ಕಾರ್ಯಕ್ರಮ ನಿರೂಪಿಸಿದರು

