×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಭಾರತ ಮೂಲದ ರಿಷಿ ಸುನಕ್ ಬ್ರಿಟನ್​​ ನೂತನ ಪ್ರಧಾನಿ

ಲಂಡನ್:ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತರಿಸಿ ಸುನಕ್ ಆಯ್ಕೆಯಾಗಿದ್ದಾರೆ. ರಿಷಿ ಸುನಕ್ ಬ್ರಿಟನ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದು ಸಂಜೆ 6.30ರ ಸುಮಾರಿಗೆ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಇನ್ನು ಅಕ್ಟೋಬರ್ 28ರಂದು ರಿಷಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಿಷಿ ಸುನಕ್ ಗೆ ಬರೋಬ್ಬರಿ 193 ಸಂಸದರು ಬೆಂಬಲ ನೀಡಿದ್ದು ಇನ್ನು ರಿಷಿ ಸುನಕ್ ಗೆ ಪ್ರಬಲ ಸ್ಪರ್ಧಿಯಾಗಿದ್ದ ಸಂಸದ ಪೆನ್ಸಿ ಮೋರ್ಡಾಂಟ್ ಗೆ 20 ಸಂಸದರು ಮಾತ್ರ ಬೆಂಬಲನೀಡಿದ್ದು ಹೀಗಾಗಿ ಪ್ರಧಾನಿ ಹುದ್ದೆ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೆ ಪ್ರಧಾನಿ ರೇಸ್ ನಿಂದ ಹೊರಗುಳಿದ ನಂತರ ಅವರ ನಿಷ್ಠರಾದ ಪ್ರೀತಿ ಪಟೇಲ್, ಭಾರತೀಯ ಸಂಜಾತ ರಿಷಿ ಸುನಕ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ಅವರು ಬ್ರಿಟನ್ ಪ್ರಧಾನಿಯಾಗುವುದು ಬಹುತೇಕ ನಿಶ್ಚಿತವಾಗಿತ್ತು. ಇನ್ಫೋಸಿಸ್ ನ ನಾರಾಯಣ ಮೂರ್ತಿ-ಸುಧಾ ಮೂರ್ತಿ ಅವರ ಅಳಿಯನೂ ಆಗಿರುವ ರಿಷಿ ಸುನಕ್ ಬ್ರಿಟನ್‌ನ ಮೊದಲ ಭಾರತೀಯ ಮೂಲದ ಪ್ರಧಾನಿಯಾಗಿ ಇತಿಹಾಸ ನಿರ್ಮಿಸಿದ್ದಾರೆ.

Leave a Reply

Your email address will not be published. Required fields are marked *