
ಉಡುಪಿ:ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ನಡೆಯುವ ದ್ವಿ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅಕ್ಟೋಬರ್ 29 ರಂದು ಅಂಬಾಗಿಲಿನ ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸಂಚಾಲಕರಾದ ಇರ್ಷಾದ್ ನೇಜಾರ್ ಉಡುಪಿಯ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಮಾನವ ರತ್ನ ಪ್ರಶಸ್ತಿ”ಗೆ ಸೌಹರ್ದ ಪ್ರೇಮಿ, ಹೋರಾಟಗಾರ ಗೋಪಾಲ್ ಬಿ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ” ಸೇವಾ ರತ್ನ” ಪ್ರಶಸ್ತಿಗೆ ಹಾಜಿ ಅಬ್ದುಲ್ಲಾ ಪರ್ಕಳ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ಇಪ್ಪತ್ತೈದು ಸಾವಿರ ನಗದು, ಫಲಕ ಮತ್ತು ಸನ್ಮಾನಗಳನ್ನು ಒಳಗೊಂಡಿರುತ್ತದೆ. ಸಾಧಕರಾದ ಸುಶೀಲ ನಾಡ, ಈಶ್ವರ್ ಮಲ್ಪೆ, ಜನಾರ್ದನ ತೋನ್ಸೆ, ಅಲೆವೂರು ಗಣಪತಿ ಕಿಣಿ ಅವರನ್ನು ಇದೇ ವೇದಿಕೆಯಲ್ಲಿ ಸನ್ಮಾನಿಸಲಾಗುವುದು. ಎರಡು ಸಂಘ ಸಂಸ್ಥೆಯನ್ನೂ ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದೆಂದು ಇರ್ಷಾದ್ ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಎರಡು ಸಾವಿರ ಮಂದಿ ಜನ ಸೇರಲಿದ್ದಾರೆ. ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟವು ಉಡುಪಿ ಜಿಲ್ಲೆಯ ಸಮಗ್ರ ಮುಸ್ಲಿಮ್ ಸಂಘ ಸಂಸ್ಥೆಗಳ ಒಕ್ಕೂಟವಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಮ್ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಇಬ್ರಾಹಿಂ ಕೋಟ, ಉಪಾಧ್ಯಕ್ಷರಾದ ಇದ್ರಿಸ್ ಹೂಡೆ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೌಲ, ಇಸ್ಮಾಯಿಲ್ ಕಟಪಾಡಿ ಉಪಸ್ಥಿತರಿದ್ದರು.

