×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಂಚಾಯತ್ ರಾಜ್ ಮಸೂದೆಗೆ ತಿದ್ದುಪಡಿ ಮಾಡಿ ಪಂಚಾಯತ್ ರಾಜ್ ವ್ಯವಸ್ಥೆ ಗೆ ಧಕ್ಕೆ ಉಂಟು ಮಾಡಿದೆ ಎಂದು ಆಡಳಿತಾರೂಢ ಬಿಜೆಪಿ ವಿರುದ್ಧ ಕಾಪು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಪಂಚಾಯತ್ ರಾಜ್ ಮಸೂದೆಗೆ ತಿದ್ದುಪಡಿ ಮಾಡಿ ಪಂಚಾಯತ್ ರಾಜ್ ವ್ಯವಸ್ಥೆ ಗೆ ಧಕ್ಕೆ ಉಂಟು ಮಾಡಿದೆ ಎಂದು ಆಡಳಿತಾರೂಢ ಬಿಜೆಪಿ ವಿರುದ್ಧ ಕಾಪು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ವ್ಯಕ್ತಪಡಿಅಲಾಯಿತು.ವ್ಯವಸ್ಥೆ ಗೆ ತಿದ್ದುಪಡಿ ತರುವ ಮೂಲಕ ಪಂಚಾಯತ್ ಗಳ ಅಧಿಕಾರವನ್ನು ಮೊಟಕುಗೊಳಿಸಿ ಜನತೆಗೆ ಅನ್ಯಾಯ ವೆಸಗಿದ್ದಾರೆ. ಸೋಮವಾರ ಕಾಪು ತಾಲೂಕು ಕಚೇರಿ ಮುಂಬಾಗ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ಈ ಸಂದರ್ಭ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ ಕರ್ನಾಟಕ ಸರ್ಕಾರವು ಪಂಚಾಯತ್ ರಾಜ್ ವ್ಯವಸ್ಥೆಯ ನ್ನು ತನ್ನ ಹದ್ದು ಬಸ್ತಿನಲ್ಲಿಡಲು ಪ್ರಯತ್ನಿಸುತ್ತಿದೆ. ಹದಿನೈದನೇ ಹಣಕಾಸು ಯೋಜನೆಯಡಿ ಯಾವುದೇ ಸವಲತ್ತುಗಳನ್ನು ಪಂಚಾಯತ್ ಗೆ ನೇರವಾಗಿ ಸರಬರಾಜು ಆಗುತ್ತಿತ್ತು. ಇದರ ನ್ವಯ ಜಲಸಿರಿ ಕಾರ್ಯಕ್ರಮ ದಮುಖಾಂತರ ಕುಡಿಯುವ ನೀರಿನ ಸರಬರಾಜು ಮಾಡಲು ಅವಕಾಶ ನೀಡಿತು. ಆದರೆ ಈಗ ಬರೇ ಪೈಪ್ ಹಾಕುವ ಮುಖಾಂತರ ತನ್ನ ಸುಪರ್ದಿಯ ಕಂಪನಿಗೆ ಟೆಂಡರ್ ನೀಡಿ ಕೆಲಸ ಮಾಡುತ್ತಿದೆ. ಜಲಮೂಲವನ್ನು ಹುಡುಕಿ ಟ್ಯಾಂಕ್ ಗಳ ನಿರ್ಮಾಣದ ನಂತರ ಪೈಪ್ ಹಾಕುವುದು ವಾಡಿಕೆ. ಒಟ್ಟಾರೆಯಾಗಿ ಜನರ ದುಡ್ಡು ಪೋಲಾಗುವ ಕೆಲಸ ಕಾರ್ಯಗಳು ನಡೆಯುತ್ತಿವೆ. ಪಂಚಾಯತ್ ಗಳಲ್ಲಿ ಶಾಸಕ,ಸಂಸದರ ಮೂಲಕ ಅನುದಾನ ಬರದೆ ನೇರವಾಗಿ ಪಂಚಾಯತ್ ಗೆ ಬರುವ ಹಾಗೆ ಆಗಬೇಕು ಎಂದರು. ಬಳಿಕ ಕಾಪು ತಹಶಿಲ್ದಾರರ ಅನುಪಸ್ಥಿತಿಯಲ್ಲಿ ಉಪ ತಹಶಿಲ್ದಾರ ಹರಿಪ್ರಸಾದ್ ಭಟ್ ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಶೇಖಬ್ಬ ಉಚ್ಚಿಲ ನವೀನ್ ಶೆಟ್ಟಿ ಪಡುಬಿದ್ರಿ ಶೇಖರ್ ಹೆಜಮಾಡಿ  ಸತೀಶ್  ದೇಜಡಿ ಉಚ್ಚಿಲ ಪ್ರಭಾಕರ ಕಟಪಾಡಿ ಆಶಾ ಕಟಪಾಡಿ  ರಮೀಝ್ ಕರುಣಾಕರ  ಪ್ರಭಾ ಶೆಟ್ಟಿ ಉಸ್ಮಾನ್ ಕಾಪು ಮತ್ತು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *