
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡಪಾನರ ಅವರನ್ನ ಬುಧವಾರ ಬೆಳಗ್ಗೆ ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮುಂಭಾಗದಲ್ಲಿ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಅವರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ನೂರಾರು ಗ್ರಾಮಸ್ಥರು ಹಿತೈಷಿಗಳು ಬಂಧುಬಾAಧವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗುಡ್ಡಪಾನರ ಇವರಿಗೆ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ವತಿಯಿಂದ ಸಂಗದ ಅಧ್ಯಕ್ಷ ಸುಭಾಶ್ ಮೂಳೂರುರವರು ಗೌರವಾರ್ಪಣೆ ಮಾಡಿ ಸ್ವಾಗತಿಸಿದರು. ತದನಂತರ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಸಾಗಿ ಮೂಳೂರು ಮಹಾಲಕ್ಷ್ಮಿ ನಗರದಲ್ಲಿರುವ ಅವರ ಮನೆಯ ವರೆಗೆ ಸ್ವಾಗತ ಮೆರವಣಿಗೆ ನಡೆಯಿತು.ಈ ಸಂದರ್ಭದಲ್ಲಿ ಊರಿನ ಗಣ್ಯರು ಮೊದಲಾದವರು ಉಪಸ್ಥಿತರಿದ್ದರು.

