×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಜಿಲ್ಲೆಯ ಕಟಪಾಡಿ ಸುಭಾಶ್ ನಗರದಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ. ದಿನಾಂಕ 06/11/2022 ರಂದು

ಕೆನ್-ಈ-ಮಾಬುನಿ ಶಿಟೋ-ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ,ಸಂಸ್ಥೆಯ ವತಿಯಿಂದ ಕಟಪಾಡಿ ಸುಭಾಷ್ ನಗರದ ಥಂಡರ್ಸ್ ಗ್ರಾಂಡ್ ಬೇ ಸಭಾಂಗಣದಲ್ಲಿ ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಸಹಕಾರಿ ಯಾಗಲಿ ಎಂಬ ಉದ್ದೇಶದಿಂದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಕೂಟ “ಕೊಂಪಿಟ್ -3.0,”ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯತೀಶ್ ಶುಕ್ರವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕರಾಟೆ ಪಟುಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಅವಕಾಶ ಪಡೆಯುವಲ್ಲಿ ಸಹಕಾರಿಯಾಗಲಿದೆ.ಸಂಸ್ಥೆಯ ಗೌರವಾಧ್ಯಕ್ಷರುಗಳಾದ ಯಶ್ ಪಾಲ್ .ಎ ಸುವರ್ಣ,ನವೀನ್ ಅಮೀನ್ ಶಂಕರಪುರ ಇವರ ಮಾರ್ಗದರ್ಶನ ದಲ್ಲಿ ಕರಾಟೆ ಶಿಕ್ಷಕ ರವಿ ಸಾಲ್ಯಾನ್ ನೇತ್ರತ್ವದಲ್ಲಿ ರಾಷ್ಟ್ರ ಮಟ್ಟದ ಒಂದು ದಿನ ದ ಪಂದ್ಯಾಕೂಟ ಜರಗಲಿದೆ. ಈ ಪಂದ್ಯಾಕೂಟ ದಲ್ಲಿ ರಾಜ್ಯದ ಅಲ್ಲದೆ ನೆರೆಯ ಗೋವಾ,ಮಹಾರಾಷ್ಟ್ರ, ಕೇರಳ ರಾಜ್ಯಗಳ ಕರಾಟೆ ಪಟುಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ಯಶ್ ಪಾಲ್ ಎ.ಸುವರ್ಣ,ನವೀನ್ ಅಮೀನ್ ಶಂಕರಪುರ, ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಕಾರ್ಯದರ್ಶಿ ರವಿ ಕೋಟ್ಯಾನ್, ಗೌರವ ಸಲಹೆ ಗಾರ ರವಿ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *