×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಪಡುಬಿದ್ರಿಯಲ್ಲಿ ತಿಂಗಳ ಸಡಗರ ಕಾರ್ಯಕ್ರಮ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಗೀತಾನಂದ ಫೌಂಡೇಶನ್ ಮಣೂರು, ಕಾಪು ತಾ| ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪಡುಬಿದ್ರಿಯ ಪಿ. ಕೆ. ಸದಾನಂದ ಅವರನ್ನು ಜಿಲ್ಲಾ ಸಾಹಿತ್ಯ ಪರಿಷತ್‌ನ ಸಂಪದ – ೨೦೨೨ರ ತಿಂಗಳ ಸಡಗರ ಕಾರ್ಯಕ್ರಮದಲ್ಲಿ ಅವರ ಮನೆಯಲ್ಲಿ ಶುಕ್ರವಾರ ಸಂಜೆ ಗೌರವಿಸಲಾಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಈ ಸಂದರ್ಭದಲ್ಲಿ ಮಾತನಾಡಿ, ಹಿರಿಯರೆಡೆಗೆ ನಮ್ಮ ನಡಿಗೆಯ ಮೂಲಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಿರಿಯರನ್ನು ಗೌರವಿಸುವ ಕಾರ್ಯಕ್ರಮವು ನಮ್ಮ ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕೆಂಬ ಆಶಯವನ್ನು ಸಾಹಿತ್ಯ ಪರಿಷತ್ ಇರಿಸಿಕೊಂಡಿದೆ. ಈ ನಿಟ್ಟಿನಲ್ಲಿ ಬಹುಮುಖ ಪ್ರತಿಭೆೆಯ, ಎಲ್ಲಾ ಕ್ಷೇತ್ರಗಳಲ್ಲೂ ಕೈಯಾಡಿಸಿರುವ ಪಡುಬಿದ್ರಿಯ ಹಿರಿಯ ಜನಪದ ಸಾಹಿತಿ ಪಿ. ಕೆ. ಸದಾನಂದ, ಶಾರದಾ ಸದಾನಂದ ದಂಪತಿಯನ್ನು ಗೌರವಿಸಿದ್ದೇವೆ ಎಂದು ಹೇಳಿದರು. ಉಡುಪಿ ತಾ| ಸಾಹಿತ್ಯ ಪರಿಷತ್ ಅಧ್ಯಕ್ಷ ರವಿರಾಜ್ ಎಚ್. ಪಿ. ಸಂದರ್ಭೋಚಿತವಾಗಿ ಮಾತನಾಡಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ರಾಮಚಂದ್ರ ಆಚಾರ್ಯರನ್ನು ವೇದಿಕೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ನೀಲಾವರ ಸುರೇಂದ್ರ ಅಡಿಗ ಗೌರವಿಸಿದರು. ಸಮಾರಂಭದಲ್ಲಿ ಕಾಪು ತಾ| ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಸುರೇಶ್ ಎರ್ಮಾಳ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಪದಾಧಿಕಾರಿ ನರಸಿಂಹ ಮೂರ್ತಿ, ಕಾಪು ತಾ| ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ದೀಪಕ್ ಬೀರ, ಕೆ. ಆರ್. ಪಾಟ್ಕರ್, ಸದಸ್ಯರಾದ ರಮಾಕಾಂತ ರಾವ್, ರಾಜೇಶ್ ಶೇರಿಗಾರ್, ಸುಂದರ್ ಕೆ., ಮಧುಕರ್ ಎಸ್. ಯು., ಪಡುಬಿದ್ರಿ ಗ್ರಾ. ಪಂ. ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು, ಗ್ರಾ. ಪಂ. ಸದಸ್ಯೆ ವಿದ್ಯಾಶ್ರೀ, ಗುತ್ತಿನಾರ್ ವಿಶುಕುಮಾರ್ ಶೆಟ್ಟಿಬಾಲ್, ಗುರುರಾಜ್ ಪೂಜಾರಿ, ಕೇಶವ ಅಮೀನ್, ಭಾಸ್ಕರ ಕೆ., ನವೀನ್, ಪ್ರಾಣೇಶ್ ಹೆಜಮಾಡಿ ಮತ್ತಿತರರಿದ್ದರು. ಕಾಪು ತಾ| ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಪುಂಡಲೀಕ ಮರಾಠೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಗೌ| ಕೋಶಾಧಿಕಾರಿ ವಿದ್ಯಾಧರ ಪುರಾಣಿಕ್ ವಂದಿಸಿದರು.

Leave a Reply

Your email address will not be published. Required fields are marked *