
ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 11 ರಂದು ಬೆಂಗಳೂರಿನಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸುತ್ತಿದ್ದು, ಪ್ರಗತಿಯ ಪ್ರತಿಮೆ ಆವರಣದಲ್ಲಿನ ಗೋಪುರ ನಿರ್ಮಾಣಕ್ಕೆ ನಾಡಿನಾದ್ಯಂತ ಪವಿತ್ರ ಮಣ್ಣು ಸಂಗ್ರಹ ಅಭಿಯಾನ ನಡೆಯುತ್ತಿದೆ. ನಾಡಪ್ರಭು ಕೆಂಪೇಗೌಡ ರಥ ಉಡುಪಿ ಜಿಲ್ಲೆಗೆ ತಲುಪಿದ್ದು ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರೊಂದಿಗೆ ಶಾಸಕ ಕೆ. ರಘುಪತಿ ಭಟ್ ರಥವನ್ನು ಸ್ವಾಗತಿಸಿ ಉಡುಪಿ ಜಿಲ್ಲೆಯ ಪವಿತ್ರ ಮಣ್ಣನ್ನು ಅಭಿಯಾನಕ್ಕೆ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಕಿರಣ್ ಪೆಡ್ನೇಕರ್ ಉಪಸ್ಥಿತರಿದ್ದರು.

