
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ 1200 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ ಚಿತ್ರ ಬಿಡಿಸುವ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಗುಡ್ಡಪಾಣಾರ ರವರಿಗೆ ಸನ್ಮಾನ ಕಾರ್ಯಕ್ರಮ ಉಡುಪಿಯ ಪುರಭವನದಲ್ಲಿ ನ.11 ರಂದು ಬೆಳಿಗ್ಗೆ 10.30ಕ್ಕೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷ ಯತ್ಪಾಲ್ ಎ.ಸುವರ್ಣ ಅವರು ತಿ ಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಮೂಲಕ ಮಾಹಿತಿ ನೀಡಿದ ಅವರು,ಸಮಾರಂಭವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ.ಜಿ. ಶಂಕರ್ ಉದ್ಘಾಟಿಸಲಿದ್ದಾರೆ.ಬ್ಯಾಂಕಿನ ಅಧ್ಯಕ್ಷ ಯತ್ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚಿಂದ್ರ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ’ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಚಿತ್ರ ಬಿಡಿಸುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿರಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.ಹಾಗೂ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅವರ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ,ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋ ರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್., ಉಜ್ವಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಅಜಯ್ ಪಿ.ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದು ಯತ್ಪಾಲ್ ಸುವರ್ಣ ತಿಳಿಸಿದರು

