
ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ನಿನ್ನ (ನ.15) ಕೋಟ ಶ್ರೀನಿವಾಸ ಪೂಜಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, 4 ರಿಂದ 5 ದಿನ ವಿಶ್ರಾಂತಿ ಪಡೆಯಲಿದ್ದಾರೆ. ಈ ಕುರಿತು ಟ್ವಿಟ್ ಮಾಡಿ ಮಾಹಿತಿ ನೀಡಿರುವ ಅವರು, ತುರ್ತು ಚಿಕಿತ್ಸೆಗಾಗಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ.ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನು ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆ” ಎಂದಿದ್ದಾರೆ.

