×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವತಿಯಿಂದ ನಿರ್ವಹಣೆ ಬೂತ್ ಧ್ವನಿವರ್ಧಕ ಕೊಡುಗೆ

ವಾಹನದಟ್ಟನೆ ನಿಯಂತ್ರಿಸಿ, ಸರ‍್ವಜನಿಕರು ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವ ಪೊಲೀಸರ ಕಾರ್ಯದಲ್ಲಿ ಸಹಕಾರಿ ಸಂಸ್ಥೆ ನೆರವಾಗುವ ಮೂಲಕ ಉತ್ತಮ ಕೆಲಸ ಮಾಡಿದೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮೆಚ್ಚಿಗೆ ವ್ಯಕ್ತಪಡಿಸಿದರು. ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹ ಕರ‍್ಯಕ್ರಮ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವತಿಯಿಂದ ಪಡುಬಿದ್ರಿ ಪೊಲೀಸ್ ಠಾಣೆಗೆ ಕೊಡಮಾಡಿದ ದ್ವನಿವರ್ಧಕ ಹಾಗೂ ಸಂಚಾರ ನಿರ್ವಹಣೆ ಬೂತನ್ನು ಬುಧವಾರ ಹಸ್ತಾಂತರಿಸಿ ಮಾತನಾಡಿದರು. ಆರಕ್ಷಕ ಠಾಣೆಗೆ ನೀಡಿದ ಧ್ವನಿವರ್ಧಕವನ್ನು ಕಾರ್ಕಳ ಉಪ ವಿಭಾಗದ ಡಿ ವೈ ಎಸ್ ಪಿ ವಿಜಯಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಪೂವಯ್ಯ ಕೆ ಸಿ., ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ಅವರಿಗೆ ಹಸ್ತಾಂತರಿಸಲಾಯಿತು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್, ಉಪಾಧ್ಯಕ್ಷ ಗುರುರಾಜ್ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತ ಪಿ .ಎಚ್. ನಿರ್ದೇಶಕರಾದ ಗಿರೀಶ್ ಪಲಿಮಾರು, ವಾಸುದೇವ ಪಲಿಮಾರು, ವೈ ಜಿ ರಸೂಲ್, ಯಶವಂತ, ಶಿವರಾಮ ಶೆಟ್ಟಿ, ಸುಚರಿತ ಎಲ್ ಅಮೀನ್, ಸ್ಟ್ಯಾನಿ ಕ್ವಾಡ್ರಸ್, ರಾಜಾರಾಮ್, ಮಾಧವ ಆಚರ‍್ಯ ಮತ್ತಿತರರು ಉಪಸ್ಥಿತರಿದ್ದರು. 

video link

https://youtu.be/N3Fz2r5K4kc

Leave a Reply

Your email address will not be published. Required fields are marked *