×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ.

ಕಾಪು : ಉನ್ನತ ವಿದ್ಯಾಭ್ಯಾಸ ಗಳಿಸಲು ಆರ್ಥಿಕವಾಗಿ ಆಶಕ್ತರಾಗಿದ್ದವರು ಜಮೀಯ್ಯತುಲ್ ಫಲಾಹ್ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ಪಡೆದು ವಿದ್ಯಾಭ್ಯಾಸ ಮುಂದುವರಿಸಿದ ಕಾರಣ ಹಲವಾರು ಮಂದಿ ಇಂದು ಸಮಾಜದಲ್ಲಿ ಉನ್ನತ ಸ್ಥಾನಮಾನದಲ್ಲಿದ್ದಾರೆ. ಹಾಗೆಯೇ ಪ್ರತಿಯೊಬ್ಬರೂ ಉತ್ತಮ ವಿದ್ಯಾಭ್ಯಾಸ ಪಡೆದು ತಮ್ಮದೇ ಆದ ಕೊಡುಗೆಯನ್ನು ಸಮಾಜಕ್ಕೆ ನೀಡಬೇಕು ಎಂದು ಉಡುಪಿ ಮತ್ತು ದ. ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಜನಾಬ್ ಶಭೀ ಅಹಮದ್ ಕಾಝಿ ಯವರು, ಕಾಪು ಸಿಟಿ ಸೆಂಟರ್ ನಲ್ಲಿ ಜಮೀಯ್ಯತುಲ್ ಫಲಾಹ್ ದ ಸ್ವಂತ ಕಚೇರಿಯಲ್ಲಿ, ವಿದ್ಯಾರ್ಥಿ ವೇತನ ವಿತರಿಸುವ ಸಮಾರಂಭದಲ್ಲಿ ಸಭಾ ಅಧ್ಯಕ್ಷತೆ ವಹಿಸಿ ಹೇಳಿದರು. ಮುಖ್ಯ ಅತಿಥಿಯಾಗಿ ಅಶ್ಫಾಕ್ ಅಹಮದ್ ಮೊಹ್ಸಿನ್ ಮುಜಾವರ್ ರವರು , ಇಂದು ವಿದ್ಯಾಭ್ಯಾಸದ ತುಂಬಾ ಅಗತ್ಯವಿದ್ದು , ತಾವುಗಳು ಉನ್ನತ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಗೌರವಾನ್ವಿತ ಹುದ್ದೆಗಳನ್ನು ಪಡೆಯಬೇಕು. ನಿಮ್ಮ ಭವಿಷ್ಯ ಉತ್ತಮವಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಅವರು ಜಮೀಯ್ಯತುಲ್ ಫಲಾಹ್ ಸಂಸ್ಥೆಗೆ ಅಜೀವ ಸದಸ್ಯರಾಗಿ ತಮ್ಮ ಹೆಸರನ್ನು ನೋಂದಾಯಿಸಿದರು. ಈ ವರ್ಷ ಒಂದು ಲಕ್ಷದ ಹದಿನೈದು ಸಾವಿರ ರೂಪಾಯಿಗಳು ವಿದ್ಯಾರ್ಥಿ ವೇತನಕ್ಕೆ ಮತ್ತು ನಲ್ವತೈದು ಸಾವಿರ ರೂಪಾಯಿಗಳನ್ನು ಔಷದೋಪಚಾರಕ್ಕೆ ನೀಡಲಾಗುತ್ತದೆ ಎಂದು ಕಾರ್ಯದರ್ಶಿ ಸಾಬೀರ್ ಅಲಿ ಏರ್ಮಾಲ್ ತಿಳಿಸಿದರು. ಅನ್ವರ್ ಅಲಿ ಯವರ ಕುರ್ ಆನ್ ಪಠಣ ದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.
ಶಬೀ ಅಹಮದ್ ಕಾಝಿ ಸ್ವಾಗತಿಸಿದರು. ಬಷೀರ್ ಅಹಮದ್ ಧನ್ಯವಾದ ನೀಡಿದರು. ಅನ್ವರ್ ಅಲಿ ಕಾಪು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *