
1992 ರಲ್ಲಿ ಸ್ಥಾಪನೆಯಾದ ಕಾಪುವಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 30 ವರ್ಷ ಆದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಹೊಸ ಕಟ್ಟಡ “ಮುತ್ತು” ವಿಗೆ ಶಿಲಾನ್ಯಾಸ ನೆರವೇರಿತು.ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಚಿತ್ರನಟ ಭೋಜರಾಜ್ ವಾಮಂಜೂರು, ಕಾಲೇಜು ಪ್ರಾಂಶುಪಾಲ ಸ್ಟೀವನ್ ಕ್ವಾಡ್ರಸ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರೋಶಿ ಯಶ್ವಂತ್, ವಿದ್ಯಾರ್ಥಿ ಪರಿಷತ್ತಿನ ನಾಯಕ ಗೌರವ್ ಕಾಲೇಜು ಅಡಳಿತ ಮಂಡಳಿಯ ಸದಸ್ಯರು, ಬೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

